ಮೈಸೂರು | ಅರಮನೆಗೆ ಬಂದ ಗಜ ಪಡೆಗಳಿಗೆ ಅದ್ದೂರಿ ಸ್ವಾಗತ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ವಿದ್ಯುಕ್ತವಾಗಿ ಸ್ವಾಗತ ಕೋರಲಾಯಿತು.
ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಶುಕ್ರವಾರ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಇಂದಿನಿಂದ ದಸರಾ ಮುಗಿಯುವವರೆಗೂ ಅರಮನೆ ಆವರಣದಲ್ಲಿ ಬೀಡು ಬಿಟ್ಟ ಗಜಪಡೆಗಳಿಗೆ ವಿಶೇಷ ಉಪಚಾರ ಮಾಡಲಾಗುವುದು. ಗಜಪಡೆಗಳ ಆರೋಗ್ಯ ಸುರಕ್ಷತೆಗೆ ವೈದ್ಯರ ತಂಡ ನಿರಂತರ ತಪಾಸಣೆ ಮಾಡಿ ಆನೆಗಳ ತೂಕ ಹೆಚ್ಚಳಕ್ಕೆ ವ್ಯವಸ್ಥೆ ಮಾಡಲಾಗುವುದು.
ಈ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಟಿ.ಎಸ್. ಶ್ರೀವತ್ಸ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.