ಮೈಸೂರು | ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲು
ಮೈಸೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಬಿಎನ್ಎಸ್ ಕಲಂ 353(1)(ಬಿ) ಅನ್ವಯ ಸ್ನೇಹಮಯಿ ಕೃಷ್ಣ ವಿರುದ್ದ ಪ್ರಕರಣ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಮೂಲಕ ಅವರ ತೆಜೋವಧೆ ಮಾಡುವುದರೊಂದಿಗೆ ಸಮಾಜದಲ್ಲಿ ಗುಂಪುಗಳ ನಡುವೆ ಮತ್ತು ಸಮಾಜಗಳ ನಡುವೆ ದ್ವೇಷ, ಭಯವನ್ನು ಹುಟ್ಟಿಸಿ ಸಾರ್ವಜನಿಕ ಶಾಂತಿ ಸಹಬಾಳ್ವೆಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Next Story