ಮುಡಾ ಪ್ರಕರಣದಿಂದ ಹಿಂದೆ ಸರಿಯುವಂತೆ ಆಮಿಷ : ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ದೂರು
ಮೈಸೂರು : ಮುಡಾ ಪ್ರಕರಣದಿಂದ ಹಿಂದೆ ಸರಿಯಿರಿ ಎಂದು ನನಗೆ ಹಾಗೂ ನನ್ನ ಕುಟುಂಬಕ್ಕೆ ಆಮಿಷ, ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಗಂಭೀರ ಆರೋಪ ಮಾಡಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಿಂದ ಹಿಂದೆ ಸರಿಯಿರಿ ಎಂದು ಒತ್ತಡ ಹಾಕಲಾಗುತ್ತಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಹರ್ಷ, ಶ್ರೀನಿಧಿ ಎಂಬವವರು ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದರು.
ಪಾರ್ವತಿ ಅವರ ಆಪ್ತ ಸಹಾಯಕ ಹರ್ಷ ಎಂದು ಹೇಳಿಕೊಂಡಿದ್ದ ವ್ಯಕ್ತಿ. ಆರಂಭದಲ್ಲಿ ನನ್ನ ಮೇಲೆ ಒತ್ತಡ ತಂದರು. ನಾನು ಮನೆಯಲ್ಲಿ ಇಲ್ಲದ ವೇಳೆ ನನ್ನ ಮನೆ ಬಳಿ ಬಂದಿದ್ದಾರೆ. ನನ್ನ ಮಗನಿಗೂ ಅವರು ಆಮಿಷ ಒಡ್ಡಿದ್ದಾರೆ. ಈ ಕುರಿತು ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿ ಸಿಸಿಟಿವಿ ದೃಶ್ಯ ಸಮೇತ ಲೋಕಾಯುಕ್ತ ಎಸ್ಪಿ ಉದೇಶ್ ಅವರಿಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
Next Story