ಚೆಕ್ ಬೌನ್ಸ್ ಪ್ರಕರಣ | ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಸ್ನೇಹಮಯಿ ಕೃಷ್ಣ
ಮೈಸೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಹೆಚ್ವುವರಿ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶ ಹೊರಡಿಸಿದೆ.
ಲಲಿತಾದ್ರಿಪುರದ ಕುಮಾರ್ ಎಂಬವರಿಂದ 2015ರಲ್ಲಿ ಸಾಲ ಹಣ ಪಡೆದಿದ್ದರು. ಇದಕ್ಕೆ ಪ್ರತಿಯಾಗಿ ಮರ್ಚೆಂಟ್ ಕೋ ಆಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು. ಕುಮಾರ್ ಅವರು ತಮ್ಮ ಬ್ಯಾಂಕ್ ಖಾತೆ ಮೂಲಕ ಚೆಕ್ ಹಾಕಿದ್ದರು. ಆಗ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಗುರುವಾರ ಶಿಕ್ಷೆ ವಿಧಿಸಿ ಆದೇಶ ನೀಡಿದೆಯಾದರೂ ಶಿಕ್ಷೆಯ ಪ್ರಮಾಣ ಪ್ರಕಟಿಸಿಲ್ಲ.
Next Story