ಸಂಸದ ಪ್ರತಾಪ್ ಸಿಂಹ ವಿರುದ್ಧ Facebookನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪ: ಟ್ರಾಫಿಕ್ ಹೆಡ್ ಕಾನ್ ಸ್ಟೇಬಲ್ ಅಮಾನತು

ಮೈಸೂರು, ಜು.2: ತನ್ನ ಫೇಸ್ ಬುಕ್ ಖಾತೆಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಟ್ರಾಫಿಕ್ ಹೆಡ್ ಕಾನ್ ಸ್ಟೇಬಲ್ ಒಬ್ಬರನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ನಗರದ ವಿ.ವಿ.ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಪ್ರಕಾಶ್ ಅಮಾನತುಗೊಂಡವರು.
ಸಂಸದ ಪ್ರತಾಪ್ ಸಿಂಹ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ನಡುವೆ ಮಾಧ್ಯಮದಲ್ಲಿ ವಾದ-ವಿವಾದ ನಡೆಯುತ್ತಿತ್ತು. ಈ ಸಂದರ್ಭ ಬಿ.ಪ್ರಕಾಶ್ ಅವರು, ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಸಂಸದ ಪ್ರತಾಪ್ ಸಿಂಹ ಜೂ.30ರಂದು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ದೂರನ್ನು ಪರಿಶೀಲಿಸಿದ ಆಯುಕ್ತ ರಮೇಶ್ ಬಾನೋತ್ ಅವರು ಬಿ.ಪ್ರಕಾಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Next Story