ಉತ್ತರ ಪ್ರದೇಶ | ಭೀಕರ ರಸ್ತೆ ಅಪಘಾತ; ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ಮೃತ್ಯು

Photo credit: PTI
ಪ್ರಯಾಗ್ ರಾಜ್: ಕುಂಭಮೇಳಕ್ಕೆ ಭಕ್ತಾದಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ, ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪ್ರಯಾಗ್ ರಾಜ್ ನಲ್ಲಿ ನಡೆದಿದೆ.
ಮಹಾ ಕುಂಭಮೇಳಕ್ಕೆ ಛತ್ತೀಸ್ ಗಢದಿಂದ ಭಕ್ತಾದಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಶುಕ್ರವಾರ ತಡ ರಾತ್ರಿ ಮೇಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಯಾಗ್ ರಾಜ್-ಮಿರ್ಝಾಪುರ್ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಯಮುನಾನಗರ ಉಪ ಪೊಲೀಸ್ ಆಯುಕ್ತ ವಿವೇಕ್ ಚಂದ್ರ ಯಾದವ್, “ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ವರೂಪ್ ರಾಣಿ ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಂದಿನ ಪ್ರಕ್ರಿಯೆ ಪ್ರಗತಿಯಲ್ಲಿದೆ” ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Next Story