ಪಶ್ಚಿಮ ಬಂಗಾಳ ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಸಂತ್ರಸ್ತೆಯನ್ನು ರಾಜಭವನ ಬಿಟ್ಟು ತೆರಳದಂತೆ ತಡೆದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು
PC : PTI
ಕೊಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ್ ಬೋಸ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಮಹಿಳೆಯನ್ನು ರಾಜಭವನ ಬಿಟ್ಟು ತೆರಳದಂತೆ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪೊಲೀಸರು ನಗರದ ಹರೇ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ರಾಜಭವನದಲ್ಲಿ ಗುತ್ತಿಗೆಯಾಧಾರದಲ್ಲಿ ಕೆಲಸ ಮಾಡುವ ಸಂತ್ರಸ್ತೆ ತನ್ನ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿದ ನಂತರ ಪ್ರಕರಣ ದಾಖಲಾಗಿದೆ.
ಮೇ 2ರಂದು ಸಂತ್ರಸ್ತೆ ರಾಜಭವನದಿಂದ ಹೊರಹೋಗದಂತೆ ಆಕೆಯನ್ನು ತಡೆದ ಆರೋಪವನ್ನು ಈ ಮೂವರು ಅಧಿಕಾರಿಗಳ ವಿರುದ್ಧ ಹೊರಿಸಲಾಗಿರುವುದರಿಂದ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 2ರಂದು ಮಹಿಳೆ ತನಗೆ ರಾಜ್ಯಪಾಲರು ಲೈಂಗಿಕ ಕಿರುಕುಳ ನೀಡಿದ್ದರೆಂದು ಆರೋಪಿಸಿದ್ದ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು.
ಸಂವಿಧಾನದ ವಿಧಿ 361 ಅನ್ವಯ ರಾಜ್ಯಪಾಲರೊಬ್ಬರು ಅಧಿಕಾರದಲ್ಲಿರುವಾಗ ಅವರ ವಿರುದ್ಧ ಪ್ರಕರಣ ದಾಖಲಿಸುವಂತಿಲ್ಲ.
Next Story