ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಮೃತ್ಯು: ತನಿಖೆ ಆರಂಭ
ಹೊಸದಿಲ್ಲಿ: ಅಮೆರಿಕದ ಓಹಿಯೊ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿ ನಿಗೂಢವಾಗಿ ಸಾವಿಗೀಡಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್ ನಲ್ಲಿರುವ ಭಾರತೀಯ ಕಾನ್ಸುಲೇಟ್ ಹೇಳಿಕೆ ನೀಡಿದೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸಾಧ್ಯವಾದ ಎಲ್ಲ ನೆರವು ನೀಡುವುದಾಗಿ ಸ್ಪಷ್ಟಪಡಿಸಿದೆ.
ಓಹಿಯೊದ ಕ್ಲೇವ್ ಲ್ಯಾಂಡ್ ನಲ್ಲಿ ವಿದ್ಯಾರ್ಥಿಯಾಗಿದ್ದ ಉಮಾ ಸತ್ಯಸಾಯಿ ಗದ್ದೆ ಅವರ ದುರದೃಷ್ಟಕರ ಸಾವಿನ ಘಟನೆಯಿಂದ ಅತೀವ ದುಃಖವಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಎಕ್ಸ್ ಪೋಸ್ಟ್ ನಲ್ಲಿ ಹೇಳಿದೆ.
ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವಿವರಿಸಿದೆ.
Next Story