Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್ ನಲ್ಲಿ ಬೀದರ್ ಪೊಲೀಸರ...

ಹೈದರಾಬಾದ್ ನಲ್ಲಿ ಬೀದರ್ ಪೊಲೀಸರ ಕೈಯ್ಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡ ಎಟಿಎಂ ದರೋಡೆಕೋರರು!

► ಒಂದೇ ಬಸ್ ನಲ್ಲಿದ್ದ ಆರೋಪಿಗಳು – ಪೊಲೀಸರು ► ಬ್ಯಾಗ್ ಚೆಕ್ಕಿಂಗ್ ಮಾಡುವಾಗ ಗುಂಡಿಕ್ಕಿ ಎಸ್ಕೇಪ್

ವಾರ್ತಾಭಾರತಿವಾರ್ತಾಭಾರತಿ16 Jan 2025 10:46 PM IST
share
ಹೈದರಾಬಾದ್ ನಲ್ಲಿ ಬೀದರ್ ಪೊಲೀಸರ ಕೈಯ್ಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡ ಎಟಿಎಂ ದರೋಡೆಕೋರರು!

ಹೈದರಾಬಾದ್ : ಗುರುವಾರ ಬೆಳಿಗ್ಗೆ ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಎಸ್‌ಬಿಐ ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ, 93 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದ ಇಬ್ಬರ ಗ್ಯಾಂಗ್ ಹೈದರಾಬಾದ್ ನಲ್ಲಿ ಬೀದರ್ ಪೊಲೀಸರ ಕೈಯ್ಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೀದರ್ ನಿಂದ ಸುಮಾರು 150 ಕಿ.ಮೀ. ದೂರದಲ್ಲಿರುವ ಹೈದರಾಬಾದ್ ಗೆ ಮಧ್ಯಾಹ್ನ ಸುಮಾರು 3-4 ರ ವೇಳೆ ಗೆ ಆಗಮಿಸಿದ ಇಬ್ಬರು ಆಗಂತುಕರು ರಿಯಾಝ್ ಎಂಬವರಿಗೆ ಸೇರಿದ ಅಫ್ಝಲ್ ಗಂಜ್ ನ ಮಸ್ಜಿದ್ ಚಮನ್ ಪ್ರದೇಶದಲ್ಲಿರುವ ಟ್ರಾವೆಲಿಂಗ್ ಏಜೆನ್ಸಿಯಾ ರೋಷನ್ ಟ್ರಾವೆಲ್ಸ್‌ನಲ್ಲಿ ಅಮಿತ್ ಕುಮಾರ್ ಎಂಬ ಹೆಸರಿನಲ್ಲಿ ರಾಯ್ಪುರಕ್ಕೆ ಟಿಕೆಟ್ ಬುಕ್ ಮಾಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬೀದರ್ ಪೊಲೀಸರು ಅಲ್ಲಿಗೆ ತೆರಳಿದ್ದಾರೆ. ರಾಯ್ಪುರಕ್ಕೆ ತೆರಳುವ ಬಸ್‌ನಲ್ಲಿ ಸಂಜೆ 7 ರ ವೇಳೆಗೆ ಪೊಲೀಸರು ಮತ್ತು ಆರೋಪಿಗಳು ಒಂದೇ ಬಸ್ ನಲ್ಲಿ ಕುಳಿತಿದ್ದಾರೆ.

ರಾಯ್ಪುರಕ್ಕೆ ಪ್ರಯಾಣಿಸುವ ಪ್ರಯಾಣಿಕರನ್ನು ಟ್ರಾವೆಲ್ ಏಜೆನ್ಸಿಯಿಂದ ಸಣ್ಣ ಬಸ್ ನಲ್ಲಿ ಕರೆದುಕೊಂಡು ಹೋಗಿ, ದೊಡ್ಡ ಬಸ್ ಗೆ ಶಿಫ್ಟ್ ಮಾಡುವ ಪರಿಪಾಠವಿದೆ. ಅದರಂತೆ, ಆ ಸಂದರ್ಭ ಸಾಮಾನ್ಯ ಸೆಕ್ಯೂರಿಟಿ ಚೆಕ್ಕಿಂಗ್ ಮಾಡಲಾಗುತ್ತದೆ. ಪ್ರಯಾಣಿಕರಲ್ಲಿ ಶಂಕಾಸ್ಪದರು ಕಂಡು ಬಂದರೆ ಅವರ ಬ್ಯಾಗ್ ಗಳನ್ನು ಪರಿಶೀಲಿಸಲಾಗುತ್ತದೆ. ಇಬ್ಬರು ದರೋಡೆಕೋರರು ಶಂಕಾಸ್ಪದವಾಗಿ ಬ್ಯಾಗ್ ಹಾಕಿದ್ದರಿಂದ ಅವರ ಮೇಲೆ ಟ್ರಾವೆಲ್ ಏಜೆನ್ಸಿ ಸಿಬ್ಬಂದಿಗೆ ಸಹಜವಾಗಿಯೇ ಅನುಮಾನ ಬಂದಿತ್ತು ಎನ್ನಲಾಗಿದೆ.

ಸವೇರಾ ಪ್ಯಾಲೇಸ್ ಬಳಿಯಿಂದ ಸಣ್ಣ ಬಸ್ ನಲ್ಲಿ ಕರೆದೊಯ್ಯುವಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಇಬ್ಬರೂ ಪ್ರಯಾಣಿಕರು ದೊಡ್ಡ ಭಾರವಾರ ಬ್ಯಾಗ್ ಹಾಕಿಕೊಂಡಿದ್ದರಿಂದ ಅವರ ಬ್ಯಾಗ್ ಗಳನ್ನು ಪರಿಶೀಲನೆ ಮಾಡಲು ಟಿಕೆಟ್ ಟ್ರಾವೆಲ್ ಏಜೆನ್ಸಿ ಟಿಕೆಟ್ ಮ್ಯಾನೇಜರ್ ಜಹಾಂಗೀರ್ ಅವರು ಪ್ರಯತ್ನಿಸಿದಾಗ, ದರೋಡೆಕೋರರು ಬ್ಯಾಗ್ ನಿಂದ ಹಣದ ಕಟ್ಟೊಂದನ್ನು ನೀಡಿ ಇಟ್ಟುಕೊಳ್ಳಿ ಎಂದು ಹೇಳಿದ್ದಾರೆ. ಆಗ ಟಿಕೆಟ್ ಮ್ಯಾನೇಜರ್ ಅವರು ಬ್ಯಾಗ್ ನಲ್ಲಿ ಏನಿದೆ ತೆಗೆಯಿರಿ ಎಂದು ಗದರಿಸಿದ್ದಾರೆ. ಕೂಡಲೇ ದರೋಡೆಕೋರರು ಗನ್ ತೆಗೆದು ಎರಡು ರೌಂಡ್ ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ. ಆರೋಪಿಗಳು ಉತ್ತರ ಭಾರತ ಮೂಲದವರು ಎಂದು ಟ್ರಾವೆಲ್ಸ್ ಏಜೆನ್ಸಿ ಮೂಲಗಳು ತಿಳಿಸಿವೆ.

ಗುಂಡು ತಗುಲಿದ ಟಿಕೆಟ್ ಮ್ಯಾನೇಜರ್ ಜಹಾಂಗೀರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X