ಹರಿದ್ವಾರ | ಕಾಲೇಜಿನಲ್ಲಿ ಏರ್ಪಡಿಸಿದ ಇಫ್ತಾರ್ ಕೂಟಕ್ಕೆ ಬಜರಂಗದಳದ ಕಾರ್ಯಕರ್ತರಿಂದ ಅಡ್ಡಿ

ಸಾಂದರ್ಭಿಕ ಚಿತ್ರ
ಹರಿದ್ವಾರ: ಉತ್ತರಾಖಂಡದ ಹರಿದ್ವಾರದಲ್ಲಿನ ರಿಷಿಕುಲ್ ಆಯುರ್ವೇದಿಕ್ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದ ವೇಳೆ ಬಜರಂಗದಳದ ಕಾರ್ಯಕರ್ತರು ಅಡ್ಡಿಪಡಿಸಿರುವ ಬಗ್ಗೆ ವರದಿಯಾಗಿದೆ.
ಶುಕ್ರವಾರ ಕೆಲ ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಇಫ್ತಾರ್ ಕೂಟ ಏರ್ಪಡಿಸಿದ್ದರು. ಈ ವೇಳೆ ಹೊರಗಿನ ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗಿದೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಕಾಲೇಜಿಗೆ ಪ್ರವೇಶಿಸಿ ಇಫ್ತಾರ್ ಕೂಟಕ್ಕೆ ಅಡ್ಡಿಪಡಿಸಿದ್ದಾರೆ.
ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಇಫ್ತಾರ್ ಕೂಟ ಏರ್ಪಡಿಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮವನ್ನು ಕೈಗೊಳ್ಳುವಂತೆ ಬಜರಂಗದಳದ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಈ ಕುರಿತು ರಿಷಿಕುಲ್ ಆಯುರ್ವೇದಿಕ್ ಕಾಲೇಜು ನಿರ್ದೇಶಕ ಡಿಸಿ ಸಿಂಗ್ ಪ್ರತಿಕ್ರಿಯಿಸಿ, ಅನುಮತಿ ಪಡೆಯದೆ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ಪಾರ್ಟಿ ಮಾಡುತ್ತಿರುವ ಬಗ್ಗೆ ದೂರು ಬಂದಿದೆ ಎಂದು ಹೇಳಿದ್ದಾರೆ.
Next Story