ಬಾಂಗ್ಲಾದೇಶ: ಸಾರ್ವತ್ರಿಕ ಚುನಾವಣೆ ಮುನ್ನಾ ದಿನ ರೈಲಿಗೆ ಬೆಂಕಿ; ನಾಲ್ವರು ಮೃತ್ಯು
Photo: ANI
ಢಾಕಾ: ಬಾಂಗ್ಲಾದೇಶ ರಾಜಾನಿಯ ಗೋಪಿಬಾಗ್ ಪ್ರದೇಶದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಜನವರಿ 7ರಂದು ನಡೆಯುವ ಸಾರ್ವತ್ರಿಕ ಚುನಾವಣೆಯ ಮುನ್ನಾ ದಿನ ಈ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬೆನಾಪೋಲ್ ಎಕ್ಸ್ಪ್ರೆಸ್ ರೈಲಿನ ನಾಲ್ಕು ಬೋಗಿಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿದ್ದು, ಸಂಸದೀಯ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಅವರಲ್ಲಿ ಭೀತಿ ಹುಟ್ಟಿಸುವ ಸಲುವಾಗಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಆಪಾದಿಸಲಾಗಿದೆ. ಢಾಕಾ ರೈಲು ನಿಲ್ದಾಣಕ್ಕೆ ಆಗಮಿಸುತ್ತಿದ್ದ ರೈಲಿನಲ್ಲಿ ಶುಕ್ರವಾರ ರಾತ್ರಿ 9ರ ಸುಮಾರಿಗೆ ಈ ದಾಳಿ ನಡೆದಿದೆ.
ಆಡಳಿತಾರೂಢ ಅವಾಲಿ ಲೀಗ್ ಹಾಗೂ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಈ ಚುನಾವಣೆಯಲ್ಲಿ ಹಣಾಹಣಿ ನಡೆಸುತ್ತಿವೆ. ಈ ರೈಲಿನಲ್ಲಿದ್ದ 292 ಮಂದಿ ಪ್ರಯಾಣಿಕರ ಪೈಕಿ ಬಹಳಷ್ಟು ಮಂದಿ ಭಾರತದಿಂದ ತವರಿಗೆ ಮರಳುತ್ತಿದ್ದರು ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
Next Story