ಭೀಮ್ ಆರ್ಮಿಯ ಚಂದ್ರಶೇಖರ್ ಆಝಾದ್ ಮೇಲೆ ದಾಳಿ ಪ್ರಕರಣ: ನಾಲ್ವರ ಬಂಧನ
Photo: PTI
ಹರಿಯಾಣ ವಿಶೇಷ ಕಾರ್ಯಪಡೆಯ ಅಂಬಾಲಾ ಘಟಕವು ಉತ್ತರ ಪ್ರದೇಶ ಪೊಲೀಸರ ಜೊತೆಸೇರಿ ಅಂಬಾಲಾದ ಶಹಜಾದ್ಪುರ ಪ್ರದೇಶದ ಧಾಬಾ ಬಳಿ ನಾಲ್ವರನ್ನು ಬಂಧಿಸಿದೆ.
ಲಕ್ನೋ: ದಿಯೋಬಂದ್ನಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ 'ರಾವಣ' ಮೇಲೆ ಗುಂಡು ಹಾರಿಸಿದ ಆರೋಪದಲ್ಲಿ ನಾಲ್ವರನ್ನು ಶನಿವಾರ ಬಂಧಿಸಲಾಗಿದೆ ಎಂದು hindustantimes ವರದಿ ಮಾಡಿದೆ. ಹರಿಯಾಣ ವಿಶೇಷ ಕಾರ್ಯಪಡೆಯ ಅಂಬಾಲಾ ಘಟಕವು ಉತ್ತರ ಪ್ರದೇಶ ಪೊಲೀಸರ ಜೊತೆಸೇರಿ ಅಂಬಾಲಾದ ಶಹಜಾದ್ಪುರ ಪ್ರದೇಶದ ಧಾಬಾ ಬಳಿ ನಾಲ್ವರನ್ನು ಬಂಧಿಸಿದೆ.
ಆರೋಪಿಗಳನ್ನು ವಿಕಾಸ್, ಪ್ರಶಾಂತ್ ಮತ್ತು ಲೋವಿಶ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಯುಪಿಯ ಸಹರಾನ್ಪುರದವರಾಗಿದ್ದಾರೆ. ನಾಲ್ಕನೇ ಆರೋಪಿ ವಿಕಾಸ್ ಹರಿಯಾಣದ ಕರ್ನಾಲ್ ಮೂಲದವನಾಗಿದ್ದಾನೆ. ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಯುಪಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಂಬಾಲಾ ಎಸ್ಟಿಎಫ್ ಘಟಕದ ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಅಮನ್ ಕುಮಾರ್ ತಿಳಿಸಿದ್ದಾರೆ.
ಅವರು ಅಂಬಾಲಾದ ಅಡಗುತಾಣದಲ್ಲಿ ತಂಗಿದ್ದಾರೋ ಇಲ್ಲವೋ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ಎಂದು ಕುಮಾರ್ ಹೇಳಿದರು. ಅವರಿಂದ ಯಾವುದೇ ಆಯುಧ ಪತ್ತೆಯಾಗಿಲ್ಲ.
Next Story