ಸಂಸದೆ ಮಹುವಾ ಮೊಯಿತ್ರಾ ವಿರುದ್ದ ತನಿಖೆ ನಡೆಸುವಂತೆ ಸ್ಪೀಕರ್ ಗೆ ಪತ್ರ ಬರೆದ ನಿಶಿಕಾಂತ್ ದುಬೆ
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪ
Photo : Mahua Moitra/Facebook
ಹೊಸದಿಲ್ಲಿ: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಣ ಪಡೆದಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಅವರ ವಿರುದ್ಧ ತನಿಖೆ ನಡೆಸುವಂತೆ ಲೋಕಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ.
ಡಿಸೆಂಬರ್ 12, 2015ರಂದು ಉದ್ಯಮಿ ಹೀರಾನಂದನಿ ಹಿತಾಸಕ್ತಿಯನ್ನು ಕಾಪಾಡಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಣ ಪಡೆದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ
ಸಂಸತ್ತಿನಲ್ಲಿ ಸಂಸದೆ ಮಹುವಾ ಮೊಯಿತ್ರಾ ಕೇಳಿರುವ 65 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಹೀರಾನಂದನಿ ಅವರ ವ್ಯವಹಾರಿಕ ಹಿತಾಸಕ್ತಿಯನ್ನು ಕಾಪಾಡಲು ಕೇಳಲಾಗಿದೆ ಎಂದು ಅವರು ದೂರಿದ್ದಾರೆ.
ಹೀಗಾಗಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ಅಮಾನತುಗೊಳಿಸಿ, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಿದ್ದಾರೆ.
#NewsAlert | BJP MP Nishikant Dubey writes to Lok Sabha Speaker OM Birla seeking an enquiry against Trinamool Congress MP Mahua Moitra, alleging bribes were taken by her for 'cash for query' in Parliament | News agency PTI reports pic.twitter.com/Xay9eOehcQ
— NDTV (@ndtv) October 15, 2023