ಪೂಂಚ್ ವಲಯದಲ್ಲಿ ಕದನ ವಿರಾಮ ಉಲ್ಲಂಘನೆ; ಪಾಕಿಸ್ತಾನದಿಂದ ಮತ್ತೆ ಗುಂಡಿನ ದಾಳಿ

PC: x.com/IndianExpress
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಸತತ ನಾಲ್ಕನೇ ರಾತ್ರಿಯೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ ಎಂದು ಅಧಿಕಾರಿಗಳು ಸೋಮವಾರ ಬೆಳಿಗ್ಗೆ ತಿಳಿಸಿದ್ದಾರೆ.
"ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಪಾಕಿಸ್ತಾನಿ ಸೇನಾ ನೆಲೆಗಳು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. ಭಾರತೀಯ ಸೇನೆಯು ಅದಕ್ಕೆ ತಕ್ಷಣವೇ ಪರಿಣಾಮಕಾರಿಯಾಗಿ ಪ್ರತಿಕ್ರಿಯೆ ನೀಡಿದೆ," ಎಂದು ಭಾರತೀಯ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ಪೂಂಚ್ ವಲಯದಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸಿದ್ದು ಇದೇ ಮೊದಲು.
ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಭಾರತ ಮತ್ತು ಪಾಕಿಸ್ತಾನಿ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು.
Next Story