ಚತ್ತೀಸ್‌ಗಡ | ಕಬ್ಬಿಣ ತಯಾರಿಸುವ ಘಟಕದ ಚಿಮಿಣಿ ಕುಸಿತ ; ಕನಿಷ್ಠ ನಾಲ್ವರು ಕಾರ್ಮಿಕರು ಮೃತ್ಯು
ರಾಯಪುರ: ಚತ್ತೀಸ್ಗಡದ ಮುಂಗೇಲಿ ಜಿಲ್ಲೆಯಲ್ಲಿ ಗುರುವಾರ ಕಬ್ಬಿಣ ತಯಾರಿಸುವ ಘಟಕದ ಚಿಮಿಣಿ ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಜಿಲ್ಲೆಯ ಸರಗಾಂವ್ ಪ್ರದೇಶದಲ್ಲಿರುವ ಸ್ಥಾವರದಲ್ಲಿ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಹಲವರು ಸಿಲುಕಿಕೊಂಡಿರುವ ಶಂಕೆಯಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಿಮಿಣಿ ಕುಸಿದು ಸ್ಥಳದಲ್ಲಿದ್ದ ಕೆಲವು ಕಾರ್ಮಿಕರು ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಎಂದು ಮುಂಗೇಲಿ ಪೊಲೀಸ್ ವರಿಷ್ಠಾಧಿಕಾರಿ ಭೋಜ್ರಾಮ್ ಪಟೇಲ್ ತಿಳಿಸಿದ್ದಾರೆ.
ಮಾಹಿತಿ ಬರುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ತಿಳಿದು ಬಂದಿದೆ. ಗಾಯಗೊಂಡ ಕಾರ್ಮಿಕರನ್ನು ರಕ್ಷಿಸಿ ಬಿಲಾಸ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕುಸಿದ ರಚನೆಯ ಅಡಿಯಲ್ಲಿ ಇನ್ನೂ ಅನೇಕ ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಅವರನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.
Next Story