ಒಂಬತ್ತನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ
ಜೈಪುರ: ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿದ ಮೂವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ರಾಜಸ್ಥಾನದ ಡುಂಗಾರ್ಪುರ ಜಿಲ್ಲೆಯಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ. ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ದೊವರ ಠಾಣಾಧಿಕಾರಿ ಹೇಮಂತ್ ಚೌಹಾಣ್ ಹೇಳಿದ್ದಾರೆ.
ಆರೋಪಿಗಳಲ್ಲಿ ವಿದ್ಯಾರ್ಥಿನಿಯ ಪರಿಚಿತ ಕೂಡಾ ಸೇರಿದ್ದ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬುಧವಾರ ಸಂಜೆ ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಅಪಹರಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದರು ಎಂದು ಆರೋಪಿಸಲಾಗಿದೆ.
ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story