ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಸಂಸತ್ ಭವನದ ಹೊರಗೆ ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್ಗಢಿ ಪ್ರತಿಭಟನೆ

Photo credit: ANI
ಹೊಸದಿಲ್ಲಿ: ಬುಧವಾರ ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆಯಾಗುವುದಕ್ಕೂ ಮುನ್ನ, ಅದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್ಗಢಿ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಿದರು. ಕಪ್ಪು ಬಟ್ಟೆ ಧರಿಸಿದ್ದ ಇಮ್ರಾನ್ ಪ್ರತಾಪ್ಗಢಿ, "ವಕ್ಫ್ ಮಸೂದೆಯನ್ನು ತಿರಸ್ಕರಿಸಿ" ಎಂಬ ಭಿತ್ತಿಫಲಕವನ್ನು ತಮ್ಮ ಪ್ರತಿಭಟನೆಯ ವೇಳೆ ಪ್ರದರ್ಶಿಸಿದರು.
1995ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಉದ್ದೇಶ ಹೊಂದಿರುವ ವಕ್ಫ್ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಲು ಇಂದು ಅದನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ.
Next Story