ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಫೆಲಸ್ತೀನ್ ಗೆ ಬೆಂಬಲ ಸೂಚನೆ
PHOTO : indiatoday.in
ಹೊಸದಿಲ್ಲಿ : ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷವು ಇಸ್ರೇಲ್ - ಹಮಾಸ್ ಹೋರಾಟಗಾರರ ನಡುವೆ ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿತು ಎಂದು indiatoday.in ವರದಿ ಮಾಡಿದೆ.
ಕಾಂಗ್ರೆಸ್ ಪಕ್ಷವು "ಫೆಲೆಸ್ತೀನ್ ಜನರ ಭೂಮಿ, ಸ್ವ-ಸರ್ಕಾರ, ಘನತೆ ಮತ್ತು ಗೌರವದಿಂದ ಬದುಕುವ ಹಕ್ಕುಗಳಿಗಾಗಿ" ತನ್ನ ಬೆಂಬಲವನ್ನು ಸೂಚಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಪಕ್ಷವು " ಪ್ರಸ್ತುತ ಸಂಘರ್ಷಕ್ಕೆ ಕಾರಣವಾದ ಸಮಸ್ಯೆಗಳು ಸೇರಿದಂತೆ ಎಲ್ಲಾ ಬಾಕಿ ಉಳಿದಿರುವ ವಿಷಯಗಳ ಬಗ್ಗೆ ಮಾತುಕತೆಗಳನ್ನು ಪ್ರಾರಂಭಿಬೇಕು" ಎಂದು ತಿಳಿಸಿದೆ.
ಈ ಕುರಿತು ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಫೆಲೆಸ್ತೀನ್ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ಮಾತುಕತೆಯ ಮೂಲಕ ಪೂರೈಸಬೇಕು ಎಂದು ತಮ್ಮ ಪಕ್ಷವು ಯಾವಾಗಲೂ ನಂಬುತ್ತದೆ ಎಂದು ಹೇಳಿದ್ದಾರೆ.
ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ಗುಂಪಿನ ನಡುವಿನ ಸಂಘರ್ಷ ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.
Next Story