ಮೂರನೇ ಬಾರಿ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ
LIVE - ರಾಷ್ಟ್ರಪತಿ ಭವನದಲ್ಲಿ ದೇಶ ವಿದೇಶಗಳ ಗಣ್ಯರ ಉಪಸ್ಥಿತಿ
Photo : PTI
ಹೊಸದಿಲ್ಲಿ : ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದರು.
Live Updates
- 9 Jun 2024 1:51 PM GMT
ರಾಷ್ಟ್ರಪತಿ ದೌಪದಿ ಮುರ್ಮು ಆಗಮನ
- 9 Jun 2024 1:34 PM GMT
ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅತಿಥಿಗಳ ಆಗಮನ
ನಿಯೋಜಿತ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ದೇಶ ವಿದೇಶಗಳ ಗಣ್ಯರು ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದಾರೆ.
ರಜನಿಕಾಂತ್, ಅನಿಲ್ ಕಪೂರ್ ಮತ್ತು ಅನುಪಮ್ ಖೇರ್ ಮೋದಿ ಪ್ರಮಾಣ ವಚನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರಲ್ಲದೆ, ನಟರಾದ ಅಕ್ಷಯ್ ಕುಮಾರ್, ವಿಕ್ರಾಂತ್ ಮಾಸ್ಸೆ ಮತ್ತು ಚಲನಚಿತ್ರ ನಿರ್ಮಾಪಕ ರಾಜ್ಕುಮಾರ್ ಹಿರಾನಿ ಕೂಡ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.
- 9 Jun 2024 1:22 PM GMT
ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ: ನಿರ್ಗಮಿತ ಕೇಂದ್ರ ಸಚಿವ ಅನುರಾಗ್ ಠಾಕೂರ್
''ನಾನು ಮೊದಲು ಪಕ್ಷದ ಕಾರ್ಯಕರ್ತ. ಹಿಮಾಚಲ ಪ್ರದೇಶದ ಹಮೀರ್ಪುರದ ಜನರು ನನ್ನನ್ನು ಸತತ ಐದನೇ ಬಾರಿಗೆ ಲೋಕಸಭೆಗೆ ಆಯ್ಕೆ ಮಾಡಿದ್ದಾರೆ. ಐದನೇ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿರುವುದು ದೊಡ್ಡ ಗೌರವವಾಗಿದೆ" ಎಂದು ನಿರ್ಗಮಿತ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಯು ನನಗೆ ಐದು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅವಕಾಶವನ್ನು ನೀಡಿದೆ. ಇದಕ್ಕಿಂತ ದೊಡ್ಡ ಅವಕಾಶ ನನಗೆ ಇರಲಾರದು. ನಾನು ಈ ಹಿಂದೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ ಮತ್ತು ಮುಂದೆಯೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ನಮ್ಮ ಸಂಪೂರ್ಣ ಪ್ರಯತ್ನ ಭಾರತವನ್ನು ಪ್ರಗತಿಯ ಪಥದಲ್ಲಿ ಕೊಂಡೊಯ್ಯುವುದಾಗಿದೆ. ನಾವೆಲ್ಲರೂ ಒಟ್ಟಾಗಿ ನಡೆಯುತ್ತೇವೆ. ಏಕೆಂದರೆ ನಮಗೆ ದೇಶ ಮುಖ್ಯ” ಅವರು ಅನುರಾಗ್ ಠಾಕೂರ್ ಹೇಳಿದರು.
- 9 Jun 2024 12:57 PM GMT
ನಾವು ಕಾಯುತ್ತೇವೆ, ನಮಗೆ ಕ್ಯಾಬಿನೆಟ್ ಸಚಿವ ಸ್ಥಾನ ಬೇಕು : ಅಜಿತ್ ಪವಾರ್
ನಾವು ಕಾಯಲು ಸಿದ್ಧ, ಆದರೆ ನಮಗೆ ಕ್ಯಾಬಿನೆಟ್ ಸಚಿವ ಸ್ಥಾನ ಬೇಕು ಎಂದು ಎನ್ ಸಿ ಪಿ ಮುಖ್ಯಸ್ಥ ಅಜಿತ್ ಪವಾರ್ ಹೇಳಿದ್ದಾರೆ.
ನಿಯೋಜಿತ ಪ್ರಧಾನಿ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನಗೆ ಆರಂಭವಾಗುತ್ತಿದ್ದಂತೆ ಅಜಿತ್ ಪವಾರ್ ಹೇಳಿಕೆ ಹೊರಬಂದಿದೆ. ಈಗಾಲೇ ಎನ್ ಸಿ ಪಿ ಅಜಿತ್ ಪವಾರ್ ಪಕ್ಷಕ್ಕೆ ಸ್ವತಂತ್ರ ಹೊಣೆಯ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ನೇತೃತ್ವದ ಎನ್ ಡಿ ಎ ತಿಳಿಸಿದೆ. ಇದು ಎನ್ ಸಿ ಪಿ ಅಜಿತ್ ಪವಾರ್ ಪಕ್ಷಕ್ಕೆ ಅಸಮಾಧಾನವುಂಟು ಮಾಡಿದೆ.
- 9 Jun 2024 12:41 PM GMT
ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ತೃತೀಯಲಿಂಗಿಗಳು, ನೈರ್ಮಲ್ಯ ಕಾರ್ಯಕರ್ತರು
ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ನೂತನ ಸಂಸತ್ತಿನ ಸಂಕೀರ್ಣವನ್ನು ನಿರ್ಮಿಸಿದ ಕಾರ್ಮಿಕರು, ನೈರ್ಮಲ್ಯ ಕಾರ್ಯಕರ್ತರು ಮತ್ತು ತೃತೀಯಲಿಂಗಿಗಳು ಭಾಗವಹಿಸಲಿದ್ದಾರೆ.
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹೊಸ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಈಗಾಗಲೇ ಅವರಿಗೆಲ್ಲ ಆಹ್ವಾನ ನೀಡಲಾಗಿದೆ.
ಸಮಾರಂಭಕ್ಕೂ ಮೊದಲು, ಬಿಜೆಪಿ ಸಂಸದ ಮತ್ತು ಮಾಜಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಅವರು ತಮ್ಮ ನಿವಾಸದಲ್ಲಿ ತೃತೀಯಲಿಂಗಿ ಸಮುದಾಯದ ಸದಸ್ಯರನ್ನು ಅಭಿನಂದಿಸಿದರು. ಬಿಜೆಪಿ ಸಂಸದ ಮತ್ತು ಮಾಜಿ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ನೈರ್ಮಲ್ಯ ಕಾರ್ಯಕರ್ತರನ್ನು ಸನ್ಮಾನಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇದೇ ಮೊದಲ ಬಾರಿಗೆ ತೃತೀಯಲಿಂಗಿ ಸಮುದಾಯದ ಜನರನ್ನು ಪ್ರಮಾಣ ವಚನ ಸಮಾರಂಭಕ್ಕೆ ಔಪಚಾರಿಕವಾಗಿ ಆಹ್ವಾನಿಸಲಾಗಿದೆ ಎಂದು ವೀರೇಂದ್ರ ಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಇದೇ ವೇಳೆ ಕೇಂದ್ರದ ಮಾಜಿ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ನೂತನ ಸಂಸತ್ ಭವನ ನಿರ್ಮಾಣದಲ್ಲಿ ಶ್ರಮಿಸಿದ್ದ 90 ಕಾರ್ಮಿಕರು ಮತ್ತು 30 ನೈರ್ಮಲ್ಯ ಕಾರ್ಯಕರ್ತರನ್ನು ಸನ್ಮಾನಿಸಿದರು.