ದಿಲ್ಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಗೆ ಮಧ್ಯಂತರ ಜಾಮೀನು ಮಂಜೂರು
ಉಮರ್ ಖಾಲಿದ್ (Photo: PTI)
ಹೊಸದಿಲ್ಲಿ: 2020ರ ಈಶಾನ್ಯ ದಿಲ್ಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜೆಎನ್ಯು ವಿದ್ಯಾರ್ಥಿ ಉಮರ್ ಖಾಲಿದ್ಗೆ ದಿಲ್ಲಿಯ ನ್ಯಾಯಾಲಯವು ಬುಧವಾರ ಮಧ್ಯಂತರ ಜಾಮೀನು ನೀಡಿದೆ.
ಕುಟುಂಬದಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಹಾಜರಾಗಲು ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿದೆ.
2022 ರ ಅಕ್ಟೋಬರ್ನಲ್ಲಿ ದಿಲ್ಲಿ ಹೈಕೋರ್ಟ್ನಿಂದ ಉಮರ್ ಖಾಲಿದ್ಗೆ ಜಾಮೀನು ನಿರಾಕರಿಸಲಾಯಿತು. ನಂತರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ, ನಂತರ ತಮ್ಮ ಅರ್ಜಿಯನ್ನು ಹಿಂತೆಗೆದುಕೊಂಡಿದ್ದರು. ಬಳಿಕ ಅವರು, ಎರಡನೇ ನಿಯಮಿತ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದರು, ಅದು ಈ ವರ್ಷದ ಆರಂಭದಲ್ಲಿ ತಿರಸ್ಕರಿಸಲ್ಪಟ್ಟಿತು.
ತನ್ನ ಎರಡನೇ ಸಾಮಾನ್ಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಖಾಲಿದ್ ಸಲ್ಲಿಸಿರುವ ಮೇಲ್ಮನವಿ ದಿಲ್ಲಿ ಹೈಕೋರ್ಟ್ನಲ್ಲಿ ಬಾಕಿ ಇದೆ.
Next Story