ದಿಲ್ಲಿ ಚುನಾವಣಾ ಫಲಿತಾಂಶ : ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸೋಲು

ಅರವಿಂದ್ ಕೇಜ್ರಿವಾಲ್ (PTI)
ಹೊಸದಿಲ್ಲಿ : ದಿಲ್ಲಿ ವಿಧಾನಸಭಾ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಹೊಸದಿಲ್ಲಿ ಕ್ಷೇತ್ರದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಜಂಗ್ಪುರ ಕ್ಷೇತ್ರದಲ್ಲಿ ಮನೀಶ್ ಸಿಸೋಡಿಯಾ ಸೋಲನ್ನು ಅನುಭವಿಸಿದ್ದಾರೆ.
ಹೊಸದಿಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ವಿರುದ್ಧ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಲನ್ನು ಕಂಡಿದ್ದಾರೆ.
ಈ ಕುರಿತು ಅಧಿಕೃತ ಘೋಷಣೆ ಇನ್ನಷ್ಟೇ ಹೊರಬರಬೇಕಿದೆ.
Next Story