ಸಂಸತ್ ನಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಪಟ್ಟು : ಒಟ್ಟು 90 ಸಂಸದರ ಅಮಾನತು
ಸಂಸತ್ ಇತಿಹಾಸದಲ್ಲೇ ಅತೀ ಹೆಚ್ಚು ಅಮಾನತು!
PHOTO : PTI
ಹೊಸದಿಲ್ಲಿ: ಕಳೆದ ವಾರ ಸಂಸತ್ತಿನಲ್ಲಿ ನಡೆದ ಭಾರೀ ಭದ್ರತಾ ವೈಫಲ್ಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ರಾಜ್ಯಸಭೆ, ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ಒಟ್ಟು 90 ಪ್ರತಿಪಕ್ಷ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸಂಸತ್ನಿಂದ ಅಮಾನತು ಮಾಡಲಾಗಿದೆ.
ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇಂದು ಲೋಕಸಭೆಯಿಂದ 31 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈಗ 46 ರಾಜ್ಯಸಭಾ ಸಂಸದರನ್ನು ಅಮಾನತು ಮಾಡಲಾಗಿದೆ. ಇದುವರೆಗೆ ಒಟ್ಟು 90 ಸಂಸದರನ್ನು ಸಂಸತ್ನಿಂದ ಅಮಾನತು ಮಾಡಲಾಗಿದೆ.
Next Story