ಮಧ್ಯಪ್ರದೇಶ | ಬೈಕ್ಗೆ ಢಿಕ್ಕಿ ಹೊಡೆದು ಬಾವಿಗೆ ಬಿದ್ದ ವ್ಯಾನ್ : 11 ಮಂದಿ ಮೃತ್ಯು

Photo | X/@ANI
ಭೋಪಾಲ್ : ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ವ್ಯಾನ್ ಬೈಕ್ಗೆ ಡಿಕ್ಕಿ ಹೊಡೆದ ಬಳಿಕ ನೀರು ತುಂಬಿದ ಬಾವಿಗೆ ಬಿದ್ದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂದಸೌರ್ ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಾನ್ನಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ವ್ಯಾನ್ನಲ್ಲಿ ತೆರಳುತ್ತಿದ್ದ 9 ಮಂದಿ ಮೃತಪಟ್ಟಿದ್ದಾರೆ. ಇದಲ್ಲದೆ ರಕ್ಷಣೆಗಾಗಿ ಬಾವಿಗೆ ಇಳಿದ ಮನೋಹರ್ ಮತ್ತು ಬೈಕ್ ಸವಾರ ಸೇರಿ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ ಎಂದು ರತ್ಲಂ ರೇಂಜ್ ಡಿಐಜಿ ಮನೋಜ್ ಸಿಂಗ್ ಹೇಳಿದ್ದಾರೆ.
ಮೃತದೇಹವನ್ನು ಬಾವಿಯಿಂದ ಹೊರತೆಗೆಯಬೇಕಾಗಿದೆ. ವ್ಯಾನ್ ಬೈಕ್ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದೆ. ಸ್ಥಳಕ್ಕೆ ಎನ್ಡಿಆರ್ಎಫ್ ತಂಡ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
Next Story