ಆರ್ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

Photo | PTI
ಹೊಸದಿಲ್ಲಿ : ಆರ್ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಸಚಿವ ಸಂಪುಟ ನೇಮಕಾತಿ ಸಮಿತಿಯು ಶಕ್ತಿಕಾಂತ ದಾಸ್ ಅವರನ್ನು 2ನೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲು ಅನುಮೋದನೆ ನೀಡಿದೆ.
ಆರ್ಬಿಐನ 25ನೇ ಗವರ್ನರ್ ಆಗಿದ್ದ ಶಕ್ತಿಕಾಂತ ದಾಸ್ ಅವರು ಡಿ. 10ರಂದು ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ ಸಂಜಯ್ ಮಲ್ಹೋತ್ರಾ ಅವರನ್ನು ಸರಕಾರ ನೇಮಕ ಮಾಡಿದೆ.
Next Story