ಭಯೋತ್ಪಾದಕರೊಂದಿಗೆ ಗುಂಡಿನ ಕಾಳಗ : ಕಾಶ್ಮೀರದಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು ಹುತಾತ್ಮ
Gunfight with terrorists: Three security personnel martyred in Kashmir

Photo: PTI
ಶ್ರೀನಗರ: ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರನಾಗ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಭಯೋತ್ಪಾದಕರೊಂದಿಗೆ ಗುಂಡಿನ ಕಾಳಗದಲ್ಲಿ ಮೂವರು ಭದ್ರತಾ ಪಡೆ ಅಧಿಕಾರಿಗಳು ಮೃತಪಟ್ಟಿದ್ದಾರೆ. ಕ.ಮನಪ್ರೀತ್ ಸಿಂಗ್, ಮೇ.ಆಶಿಷ್ ಮತ್ತು ಜಮ್ಮು-ಕಾಶ್ಮೀರ ಪೊಲೀಸ್ ನ ಡಿಎಸ್ಪಿ ಹುಮಾಯೂನ್ ಭಟ್ ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಅಧಿಕಾರಿಗಳು ಇಲ್ಲಿ ತಿಳಿಸಿದರು.
ಗಡೂಲ್ ಪ್ರದೇಶದಲ್ಲಿ ಮಂಗಳವಾರ ಸಂಜೆ ಆರಂಭಗೊಂಡಿದ್ದ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ರಾತ್ರಿ ಸ್ಥಗಿತಗೊಳಿಸಲಾಗಿತ್ತು. ಭಯೋತ್ಪಾದಕರ ಅಡಗುದಾಣ ಪತ್ತೆಯಾಗಿದೆ ಎಂಬ ಮಾಹಿತಿಯ ಮೇರೆಗೆ ಬುಧವಾರ ಬೆಳಿಗ್ಗೆ ಕಾರ್ಯಾಚರಣೆ ಪುನರಾರಂಭಗೊಂಡಿತ್ತು. ಈ ವೇಳೆ ಭಯೋತ್ಪಾದಕರು ಜಂಟಿ ಭದ್ರತಾಪಡೆ ತಂಡದ ಮೇಲೆ ಗುಂಡಿನ ದಾಳಿ ನಡೆಸಿದ್ದರು.
ಅತ್ತ ಜಮ್ಮುವಿನ ರಾಜೌರಿಯಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಸೇನಾ ಯೋಧ ರೈಫಲ್ಮನ್ ರವಿ ಹುತಾತ್ಮರಾಗಿದ್ದಾರೆ.
Next Story