ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

Photo | X/@ECISVEEP
ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಮಾಜಿ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಜ್ಞಾನೇಶ್ ಕುಮಾರ್, ಮತದಾನದ ಮೊದಲ ಹೆಜ್ಜೆ ರಾಷ್ಟ್ರ ನಿರ್ಮಾಣ. ಆದ್ದರಿಂದ 18 ವರ್ಷಗಳನ್ನು ಪೂರೈಸಿದ ಭಾರತದ ಪ್ರತಿಯೋರ್ವ ನಾಗರಿಕನು ಮತದಾರರಾಗಬೇಕು ಮತ್ತು ಮತ ಚಲಾಯಿಸಬೇಕು. ಭಾರತದ ಸಂವಿಧಾನ, ಚುನಾವಣಾ ಕಾನೂನುಗಳು, ನಿಯಮಾವಳಿಗಳು ಮತ್ತು ಸೂಚನೆಗಳಿಗೆ ಅನುಸಾರವಾಗಿ ಭಾರತದ ಚುನಾವಣಾ ಆಯೋಗವು ಮತದಾರರೊಂದಿಗೆ ಇದೆ ಮತ್ತು ಯಾವಾಗಲೂ ಇರುತ್ತದೆ ಎಂದು ಹೇಳಿದರು.
Next Story