ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸಂಜೀವ್ ಖನ್ನಾ ನೇಮಕ
ನ್ಯಾಯಮೂರ್ತಿ ಸಂಜೀವ್ ಖನ್ನಾ , ಡಿವೈ ಚಂದ್ರಚೂಡ್ | PC : X \ @MrSandeepPhogat
ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಸಂಜೀವ್ ಖನ್ನಾ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಸಂತೋಷವಾಗುತ್ತಿದೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.
ಜಸ್ಟೀಸ್ ಖನ್ನಾ ಅವರು ನವೆಂಬರ್ 11 ರಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಮತ್ತು ಮೇ 13, 2025ರವರೆಗೆ ಸುಮಾರು ಏಳು ತಿಂಗಳ ಕಾಲ ಭಾರತದ ಸಿಜೆಐ ಆಗಿ ಅಧಿಕಾರವನ್ನು ಹೊಂದಿರಲಿದ್ದಾರೆ.
ಹಾಲಿ ಸಿಜೆಐ ಡಿವೈ ಚಂದ್ರಚೂಡ್ ಅವರು ನ.10ರಂದು ತನ್ನ ಅಧಿಕಾರ ಕೊನೆಗೊಳ್ಳುವ ಹಿನ್ನೆಲೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿ ಕೇಂದ್ರಕ್ಕೆ ಪತ್ರ ಬರೆದಿದ್ದರು.