ಬಜೆಟ್ ಅಧಿವೇಶನ | ಅಮೆರಿಕದಿಂದ ಅಕ್ರಮ ವಲಸಿಗರ ಗಡಿಪಾರು ಕುರಿತು ಚರ್ಚೆಗೆ ಪ್ರತಿಪಕ್ಷಗಳಿಂದ ಪಟ್ಟು
ಉಭಯ ಸದನಗಳ ಕಲಾಪ ಮಧ್ಯಾಹ್ನದವರೆಗೆ ಮುಂದೂಡಿಕೆ

Photo: PTI
ಹೊಸದಿಲ್ಲಿ : 2025ರ ಸಂಸತ್ತಿನ ಬಜೆಟ್ ಅಧಿವೇಶನದ ಐದನೇ ದಿನವಾದ ಗುರುವಾರ ಲೋಕಸಭೆ ಮತ್ತು ರಾಜ್ಯಸಭೆಗಳ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಗಿದೆ.
ಲೋಕಸಭೆ ಮತ್ತು ರಾಜ್ಯಸಭೆಗಳ ಕಲಾಪಗಳು ಬೆಳಿಗ್ಗೆ 11 ಗಂಟೆಗೆ ಪುನರಾರಂಭಗೊಂಡಿವೆ. ಈ ವೇಳೆ ಅಮೆರಿಕದಿಂದ 100ಕ್ಕೂ ಅಧಿಕ ಭಾರತೀಯ ಅಕ್ರಮ ವಲಸಿಗರನ್ನು ಗಡೀಪಾರು ಮಾಡಿರುವ ಬಗ್ಗೆ ಚರ್ಚೆ ನಡೆಸುಂತೆ ಪ್ರತಿಪಕ್ಷಗಳು ಒತ್ತಾಯಿಸಿ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದೆ. ಈ ವೇಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಲೋಕಸಭೆಯ ಅಧಿವೇಶನವನ್ನು ಮಧ್ಯಾಹ್ನದವರೆಗೆ ಮುಂದೂಡಿದ್ದಾರೆ.
ಅಮೆರಿಕದಿಂದ 100ಕ್ಕೂ ಅಧಿಕ ಭಾರತೀಯ ಅಕ್ರಮ ವಲಸಿಗರನ್ನು ಗಡೀಪಾರು ಮಾಡಿರುವ ವಿಷಯದ ಕುರಿತು ಚರ್ಚೆ ನಡೆಸುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ರಾಜ್ಯಸಭೆಯಲ್ಲಿ ಕೂಡ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರಾಜ್ಯಸಭೆಯ ಅಧಿವೇಶನವನ್ನು ಕೂಡ ಮಧ್ಯಾಹ್ನದವರೆಗೆ ಮುಂದೂಡಲಾಗಿದೆ.
Next Story