Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ:...

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: 11ರಲ್ಲಿ 9 ಸ್ಥಾನ ಗೆದ್ದ ಬಿಜೆಪಿ ಕೂಟ

ವಾರ್ತಾಭಾರತಿವಾರ್ತಾಭಾರತಿ13 July 2024 9:46 AM IST
share
ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: 11ರಲ್ಲಿ 9 ಸ್ಥಾನ ಗೆದ್ದ ಬಿಜೆಪಿ ಕೂಟ

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 11 ಸ್ಥಾನಗಳ ಪೈಕಿ ಒಂಬತ್ತು ಸ್ಥಾನಗಳನ್ನು ಗೆಲ್ಲುವ ಮೂಲಕ ಅಚ್ಚರಿ ಮೂಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಹಾಗೂ ಬಿಜೆಪಿ ಸೇಡು ತೀರಿಸಿಕೊಂಡಿವೆ.

ಹಿರಿಯ ಬಿಜೆಪಿ ಮುಖಂಡ ಗೋಪಿನಾಥ ಮುಂಢೆಯವರ ಪುತ್ರಿ ಪಂಕಜಾ ಮುಂಢೆ ಸೇರಿದಂತೆ ಐದು ಮಂದಿಯನ್ನು ಬಿಜೆಪಿ ಕಣಕ್ಕಿಳಿಸಿದ್ದು, ಎಲ್ಲ ಐದು ಮಂದಿ ಗೆಲುವು ಸಾಧಿಸಿದ್ದಾರೆ. ಶಿವಸೇನೆ ಹಾಗೂ ಎನ್ ಸಿಪಿ ತಲಾ ಎರಡು ಸ್ಥಾನಗಳಿಗೆ ಸ್ಪರ್ಧಿಸಿದ್ದು, ಎಲ್ಲ ನಾಲ್ಕು ಮಂದಿ ಗೆಲುವಿನ ನಗೆ ಬೀರಿದ್ದಾರೆ.

ವಿರೋಧ ಪಕ್ಷಗಳ ಮೈತ್ರಿಕೂಟವಾದ ಮಹಾವಿಕಾಸ ಅಗಾಡಿಯ ಕಾಂಗ್ರೆಸ್, ಶಿವಸೇನೆ ಹಾಗೂ ಎನ್ ಸಿಪಿ ಬಣ ಮೂರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಈ ವರ್ಷದ ಕೊನೆಗೆ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ನಡೆಯುವ ರಿಹರ್ಸಲ್ ಎನಿಸಿದ್ದ ಈ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಸೋಲು ಎಂವಿಎಗೆ ಆಘಾತ ತಂದಿದೆ.

ಬಿಜೆಪಿ ಮುಖಂಡ ಹಾಗೂ ಡಿಸಿಎಂ ದೇವೇಂದ್ರ ಫಡ್ನವೀಸ್ ಎಕ್ಸ್ ಪ್ಲಾಟ್ ಫಾರಂನಲ್ಲಿ ಗೆಲುವಿನ ಸಂಭ್ರಮ ಹಂಚಿಕೊಂಡಿದ್ದು, ಟ್ವಿಟ್ಟರ್ ನಲ್ಲಿ "9/9" ಹಾಗೂ ಥಂಬ್ಸ್ ಅಪ್ ಎಮೋಜಿ ಪೋಸ್ಟ್ ಮಾಡಿದ್ದಾರೆ"

ಫಲಿತಾಂಶದ ಬಳಿಕ ಮಾತನಾಡಿದ ಅಜಿತ್ ಪವಾರ್, ಐದು ಮಂದಿ ಶಾಸಕರು ನಮ್ಮನ್ನು ಬೆಂಬಲಿಸಿದ್ದಾರೆ. ಅವರಿಗೆ ಕೃತಜ್ಞತೆಗಳು. ಚುನಾವಣೆಗಳು ನಡೆದಾಗಲೆಲ್ಲ ಆರೋಪಗಳು ಬರುತ್ತವೆ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಗುರುವಾರ ಬೆಳಿಗ್ಗೆಯಿಂದ ಮತದಾನ ನಡೆದಿದ್ದು, 11 ಸ್ಥಾನಗಳಿಗೆ 12 ಅಭ್ಯರ್ಥಿಗಳು ಕಣದಲ್ಲಿದ್ದರು.

ಶಾಸಕರೇ ಮತದಾನ ಮಾಡಿ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡುವ ಚುನಾವಣೆಯಲ್ಲಿ ಗೆಲುವಿಗೆ 23 ಶಾಸಕರ ಬೆಂಬಲ ಅಗತ್ಯವಿತ್ತು. 103 ಶಾಸಕರನ್ನು ಹೊಂದಿರುವ ಬಿಜೆಪಿ ಐದು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ನಾಲ್ಕು ಸ್ಥಾನಗಳು ಖಾತರಿಯಾದ ಬಳಿಕ ಐದನೇ ಅಭ್ಯರ್ಥಿಗೆ 12 ಮತಗಳು ಇದ್ದವು. ಶಿಂಧೆ ಬಣಕ್ಕೆ ಎರಡು ಸ್ಥಾನಗಳನ್ನು ಗೆಲ್ಲಲು ಒಂಬತ್ತು ಮತಗಳ ಕೊರತೆ ಇತ್ತು. ಅಂತೆಯೇ 39 ಸ್ಥಾನಗಳನ್ನು ಹೊಂದಿದ್ದ ಎನ್ಸಿಪಿಗೆ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸಲು ಏಳು ಸ್ಥಾನಗಳು ಕಡಿಮೆ ಇದ್ದವು. ಮಹಾಯುತಿ ಕೂಟಕ್ಕೆ ಎಲ್ಲ ಒಂಬತ್ತು ಸ್ಥಾನಗಳನ್ನು ಗೆಲ್ಲಲು ಒಟ್ಟು 28 ಮತಗಳ ಕೊರತೆ ಇತ್ತು.

ಇದಕ್ಕೆ ವಿರುದ್ಧವಾಗಿ 37 ಶಾಸಕರನ್ನು ಹೊಂದಿದ್ದ ಕಾಂಗ್ರೆಸ್ ಏಕೈಕ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು. ಪಕ್ಷದ ಬಳಿ 14 ಹೆಚ್ಚುವರಿ ಮತಗಳಿದ್ದವು. ಇದನ್ನು ಎಂವಿಎ ಪಾಲುದಾರರಿಗೆ ಹಂಚಿಕೆ ಮಾಡಲಾಗಿತ್ತು. ಪವಾರ್ ಬಣ ರೈತರ ಮತ್ತು ಕಾರ್ಮಿಕರ ಪಕ್ಷದ ಜಯಂತ್ ಪಾಟೀಲ್ ಅವರನ್ನು ಬೆಂಬಲಿಸಿತ್ತು. 13 ಶಾಸಕರನ್ನು ಹೊಂದಿದ್ದ ಪವಾರ್ ಬಣಕ್ಕೆ 10 ಮತಗಳ ಕೊರತೆ ಇತ್ತು.

ಎಂಟು ಸ್ಥಾನಗಳ ಕೊರತೆ ಇದ್ದ ಠಾಕ್ರೆ ಶಿವಸೇನೆ ಕೂಡಾ ಒಬ್ಬ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು. ಕಾಂಗ್ರೆಸ್ ಪಕ್ಷ ಹೆಚ್ಚುವರಿ ಮತಗಳನ್ನು ಮಿತ್ರಪಕ್ಷಗಳಿಗೆ ನೀಡಿದ್ದಲ್ಲಿ, ಎಲ್ಲ ಮೂರು ಸ್ಥಾನಗಳನ್ನು ಗೆಲ್ಲಲು ಎಂವಿಎಗೆ ನಾಲ್ಕು ಮತಗಳ ಕೊರತೆ ಇತ್ತು. ಎಸ್ಪಿ ಹಾಗೂ ಎಐಎಂಐಎಂನ ತಲಾ ಇಬ್ಬರು ಶಾಸಕರು ಹಾಗೂ ಸಿಪಿಐಎಂ ಹಾಗೂ ಪಕ್ಷೇತರರ ತಲಾ ಒಂದು ಮತಗಳು ನಿರ್ಣಾಯಕವಾಗಿದ್ದವು. ಹೀಗೆ ಆರು ಹೆಚ್ಚುವರಿ ಮತಗಳು ಲಭ್ಯವಾದಲ್ಲಿ ಎಲ್ಲ ಮೂರು ಸ್ಥಾನಗಳನ್ನು ಎಂವಿಎ ಗೆಲ್ಲುತ್ತಿತ್ತು. ಆದಾಗ್ಯೂ ಅಡ್ಡಮತದಾನ ನಡೆದಿರುವುದನ್ನು ಫಲಿತಾಂಶ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X