ರಾಷ್ಟ್ರಪತಿ ಆಯೋಜಿಸಿರುವ G20 ಔತಣಕೂಟಕ್ಕೆ ಆಹ್ವಾನ ನೀಡದ್ದಕ್ಕೆ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Photo: PTI
ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸಿರುವ G20 ಔತಣಕೂಟಕ್ಕೆ ವಿರೋಧ ಪಕ್ಷದ ನಾಯಕರಿಗೆ ಆಹ್ವಾನಗಳು ನೀಡದೇ ಇರುವುದು ರಾಜಕೀಯ ಹಣಾಹಣಿಗೆ ಕಾರಣವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಸರಕಾರ ಔತಣಕೂಟಕ್ಕೆ ಆಹ್ವಾನಿಸಲಿಲ್ಲ. ಇದು ಕಾಂಗ್ರೆಸ್ ಪಕ್ಷದ ನಾಯಕರ ಭಾರೀ ಆಕ್ರೋಶಕ್ಕೆ ಕಾರಣವಾಯಿತು.
ಇದೀಗ ಈ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ಮೌನ ಮುರಿದಿದ್ದಾರೆ.
‘’ಈ ವಿಚಾರದಲ್ಲಿ ಅವರು ರಾಜಕೀಯ ಮಾಡಬಾರದಿತ್ತು’’ ಎಂದು ಆಡಳಿತಾರೂಢ ಬಿಜೆಪಿ ವಿರುದ್ಧ ಖರ್ಗೆ ನೇರ ವಾಗ್ದಾಳಿ ನಡೆಸಿದರು.
ಖರ್ಗೆ ಅವರಿಗೆ ಆಹ್ವಾನ ನೀಡದೆ ಇರುವುದು "ಪ್ರಜಾಪ್ರಭುತ್ವದ ಮೇಲಿನ ದಾಳಿ" ಎಂದು ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಬಣ್ಣಿಸಿದರು., ಆದರೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು " ದೇಶದ ಶೇ.60 ರಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ನಾಯಕನಿಗೆ ಸರಕಾರ ಬೆಲೆ ನೀಡುವುದಿಲ್ಲ. "ಇದೊಂದು ವಿಧದ ಯೋಚನೆ" ಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು
ಖರ್ಗೆ ಅವರನ್ನು ಕಾರ್ಯಕ್ರಮದಿಂದ ಹೊರಗಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿದ ತಮಿಳುನಾಡು ಕಾಂಗ್ರೆಸ್ ನಾಯಕ ಮೋಹನ್ ಕುಮಾರಮಂಗಲಂ ಅವರು "ಮೋದಿ ಹೈ ತೋ ಮನು ಹೈ" ಎಂದು ಜಾತಿ ತಾರತಮ್ಯವನ್ನು ಉಲ್ಲೇಖಿಸಿದರು.
ಶನಿವಾರದ ಔತಣಕೂಟಕ್ಕೆ ಖರ್ಗೆ ಮತ್ತು ಇತರ ಪ್ರತಿಪಕ್ಷಗಳ ನಾಯಕರನ್ನು ಆಹ್ವಾನಿಸದಿದ್ದರೂ, ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳು ಸೇರಿದಂತೆ ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಆಹ್ವಾನಗಳನ್ನು ನೀಡಲಾಗಿದೆ..
ಶನಿವಾರದಂದು ನಡೆಯಲಿರುವ ರಾಷ್ಟ್ರಪತಿಯವರ ಜಿ20 ಭೋಜನಕೂಟವು ಪ್ರಗತಿ ಮೈದಾನದ ಹೊಚ್ಚಹೊಸ ಭಾರತ ಮಂಟಪದಲ್ಲಿ ನಡೆಯಲಿದೆ