ಭಾರತಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆ ಯಾವಾಗಲೂ ಸ್ಮರಣೀಯ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
ಮನಮೋಹನ್ ಸಿಂಗ್ | PTI
ಹೊಸದಿಲ್ಲಿ : ಭಾರತಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆ ಯಾವಾಗಲೂ ಸ್ಮರಣೀಯ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಈ ಕುರಿತು ಶುಕ್ರವಾರ ಜಂಟಿ ಹೇಳಿಕೆ ನೀಡಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಭಾರತಕ್ಕೆ ಅವರ ಕೊಡುಗೆಗಳು ಯಾವಾಗಲೂ ಸ್ಮರಣೀಯವಾಗಿವೆ ಎಂದು ಹೇಳಿದ್ದಾರೆ.
"ಭಾರತದ ಮಾಜಿ ಪ್ರಧಾನಿ ಮತ್ತು ದೇಶದ ಹಿರಿಯ ನಾಯಕ ಡಾ. ಸರ್ದಾರ್ ಮನಮೋಹನ್ ಸಿಂಗ್ ಅವರ ನಿಧನದಿಂದ ಇಡೀ ರಾಷ್ಟ್ರವು ಅತ್ಯಂತ ದುಃಖಿತವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಅವರ ಕುಟುಂಬಕ್ಕೆ ಮತ್ತು ಅಸಂಖ್ಯಾತ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ" ಎಂದು ಅವರು ಜಂಟಿ ಹೇಳಿಕೆಯಲ್ಲಿ ಹೇಳಿದ್ದಾರೆ.
"ಭಾರತಕ್ಕೆ ಹೆಸರಾಂತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರು ನೀಡಿರುವ ಕೊಡುಗೆಗಳನ್ನು ಯಾವಾಗಲೂ ಸ್ಮರಿಸಲಾಗುತ್ತದೆ ಮತ್ತು ಗೌರವಿಸಲಾಗುತ್ತದೆ. ಅಗಲಿದ ಅವರ ಆತ್ಮಕ್ಕೆ 'ಸದ್ಗತಿ' ನೀಡುವಂತೆ ನಾವು ಸರ್ವಶಕ್ತನನ್ನು ಪ್ರಾರ್ಥಿಸುತ್ತೇವೆ" ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ಅವರು ವಿನಮ್ರ ಹಿನ್ನೆಲೆಯಿಂದ ಬಂದಿದ್ದರೂ, ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.