ಅಮೆರಿಕದಲ್ಲಿ ತುಳಸಿ ಗಬ್ಬಾರ್ಡ್ ಭೇಟಿಯಾದ ಮೋದಿ

PC: x.com/narendramodi
ವಾಷಿಂಗ್ಟನ್: ಫ್ರಾನ್ಸ್ ಭೇಟಿಯನ್ನು ಮುಕ್ತಾಯಗೊಳಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಮೆರಿಕದ ವಾಷಿಂಗ್ಟನ್ ಡಿಸಿಯ ಜಂಟಿ ನೆಲೆ ಆ್ಯಂಡ್ರೂಸ್ ನಲ್ಲಿ ಬಂದಿಳಿದಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮೋದಿ ಈ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಎರಡು ದಿನಗಳ ಫ್ರಾನ್ಸ್ ಭೇಟಿಯ ವೇಳೆ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್ ಜತೆ ಮೋದಿ ಎಐ ಮತ್ತು ನಾಗರಿಕ ಅಣುಶಕ್ತಿ ವಿಚಾರದಲ್ಲಿ ಪರಸ್ಪರ ಸಹಭಾಗಿತ್ವ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ವಾಷಿಂಗ್ಟನ್ ನಲ್ಲಿ ಬಂದಿಳಿದ ಬಳಿಕ ಮೋದಿ, ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿ ಮಾಡಿ ಅಮೆರಿಕ- ಭಾರತ ಸ್ನೇಹ ವಿವಿಧ ಆಯಾಮಗಳ ಬಗ್ಗೆ ಮಾತುಕತೆ ನಡೆಸಿದರು.
ಇದಕ್ಕೂ ಮುನ್ನ ವಾಷಿಂಗ್ಟನ್ ನಲ್ಲಿ ಪ್ರಧಾನಿ ಮೋದಿಯವರನ್ನು ಭಾರತೀಯ ಸಮುದಾಯದವರು ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಧಾನಿ ಭೇಟಿಗಾಗಿ ಬ್ಲೇರ್ ಹೌಸ್ ನಲ್ಲಿ ಮೈನಡುಗುವ ಚಳಿಯಲ್ಲೂ ಕಾಯುತ್ತಿದ್ದ ಭಾರತೀಯ ಸಮುದಾಯಕ್ಕೆ ಮೋದಿ ಕೃತಜ್ಞತೆ ಸಲ್ಲಿಸಿದರು.
ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್ ಮಾಡಿ ►https://whatsapp.com/channel/0029VaA8ju86LwHn9OQpEq28