ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ
ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಮೇ.31ರಂದು ವಿಚಾರಣೆಗೆ ನಿಗದಿಪಡಿಸಿದೆ. ಇದಕ್ಕೂ ಮುನ್ನಾ ಪ್ರಕರಣದ ತುರ್ತು ವಿಚಾರಣೆಗೆ ವಕೀಲರ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಮೂರು ಪ್ರಕರಣಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ಸಮಯ ಬೇಕು. ನಾಳೆಯೇ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಅಲ್ಲದೆ, ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದರು.
ಪ್ರಜ್ವಲ್ ಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ದೇಶ ಬಿಟ್ಟು ಪರಾರಿಯಾಗಿದ್ದರು. ಅಲ್ಲದೆ, ಮೇ.31 ರಂದು ರಾಜ್ಯಕ್ಕೆ ವಾಪಸ್ ಆಗುವ ಬಗ್ಗೆ ವಿಡಿಯೋ ಸಹ ಪ್ರಜ್ವಲ್ ಬಿಡುಗಡೆ ಮಾಡಿದ್ದು, ದೇಶಕ್ಕೆ ವಾಪಸ್ ಆಗುತ್ತಿದಂತೆ ಬಂಧನಕ್ಕೆ ಎಸ್ಐಟಿ ಪೊಲೀಸರು ಸಿದ್ದತೆ ನಡೆಸಿಕೊಂಡಿದ್ದಾರೆ. ಹೀಗಾಗಿ ಬಂಧನ ಭೀತಿ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆಹೋಗಿದ್ದಾರೆ.