ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ʼಎನ್‌ಡಿಎʼ ಗೆಲ್ಲುತ್ತೋ? ʼಇಂಡಿಯಾʼ ಗೆಲ್ಲುತ್ತೋ?
ಹೊಸದಿಲ್ಲಿ : ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪಿದ್ದು, INDIA ಒಕ್ಕೂಟವು ಸರಕಾರ ರಚನೆಗೆ ಕಸರತ್ತು ಮುಂದುವರೆಸಿದ್ದು ಕಿಂಗ್ ಮೇಕರ್ ಗಳಾದ ಜೆಡಿಯು ಮತ್ತು ಟಿಡಿಪಿಯ ಜೊತೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಿತೀಶ್ ಕುಮಾರ್ ಅವರಿಗೆ INDIA ಒಕ್ಕೂಟ ಸೇರಿದರೆ ಉಪಪ್ರಧಾನಿ ಪಟ್ಟ ನೀಡುವ ಆಫರ್ ನೀಡಲಾಗಿದೆ ಎನ್ನಲಾಗಿದೆ.
ಆಂಧ್ರಪ್ರದೇಶದಲ್ಲಿ ಪುಟಿದೆದ್ದಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯು ವಿಧಾನಸಭೆಯಲ್ಲೂ ಜಯಭೇರಿ ಭಾರಿಸಿದೆ. ತೆಲುಗು ದೇಶಂ ಪಾರ್ಟಿಯನ್ನು ಸಂಪರ್ಕಿಸಿರುವ INDIA ನಾಯಕರು, ಒಕ್ಕೂಟ ಸೇರಿ ಸರಕಾರ ರಚನೆಗೆ ನೆರವಾದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಈ ಚುನಾವಣೆಯಲ್ಲಿ NDA ಒಕ್ಕೂಟವು ಕನಿಷ್ಠ 292 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದ್ದು, INDIA ಒಕ್ಕೂಟವು 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 239 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. INDIA ಒಕ್ಕೂಟದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎರಡನೇ ಅತೀ ದೊಡ್ಡ ಪಕ್ಷಗಾಗಿ ಹೊರಹೊಮ್ಮಿದೆ.
Live Updates
- 4 Jun 2024 7:18 AM GMT
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ಅವರ ಮುನ್ನಡೆ 28,820 ಮತಗಳಿಗೆ ಏರಿಕೆಯಾಗಿದೆ.
- 4 Jun 2024 7:18 AM GMT
ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಶನಲ್ ಕಾನ್ಫರೆನ್ಸ್ (JKNC) ನ ಮಾಜಿ ಸಿಎಂ ಉಮರ್ ಅಬ್ದುಲ್ಲಾ ಅವರು ಬಾರಾಮುಲ್ಲಾ ಕ್ಷೇತ್ರದಲ್ಲಿ 88619 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ 88619 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
- 4 Jun 2024 7:17 AM GMT
ಕೋಲಾರ: ಬಿಜೆಪಿಗೆ ಗೆಲುವು
ಕೋಲಾರ: ಬಿಜೆಪಿಗೆ ಗೆಲುವು
ಕೋಲಾರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಎನ್.ಡಿ.ಎ. ಮೈತ್ರಿ ಕೂಟದ ಅಭ್ಯರ್ಥಿ ಜೆಡಿಎಸ್ ಪಕ್ಷದ ಮಲ್ಲೇಶ್ ಬಾಬು 6.79 ಲಕ್ಷ ಮತಗಳನ್ನು ಗಳಿಸಿ ಜಯಶಾಲಿಯಾಗಿದ್ದಾರೆ.
ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಕೆ.ವಿ.ಗೌತಮ್ ವಿರುದ್ಧ 68 ಸಾವಿರ ಮತಗಳ ಗೆಲುವು ಸಾಧಿಸಿದ್ದಾರೆ.
- 4 Jun 2024 7:14 AM GMT
ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಮೇಶ ಜಿಗಜಿಣಗಿ 228322 ಮತಗಳನ್ನು ಗಳಿಸಿದರೆ, ರಾಜು ಅಲಗೂರ 188541 ಮತಗಳನ್ನು ಗಳಿಸಿದ್ದಾರೆ. ಜಿಗಜಿಣಗಿ 39781 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
- 4 Jun 2024 7:10 AM GMT
ಕಲುಬುರಗಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರು ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ವಿರುದ್ಧ 22,264 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
- 4 Jun 2024 7:08 AM GMT
ಬೀದರ್ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ 1 ಲಕ್ಷ ಮತಗಳ ಭಾರೀ ಮುನ್ನಡೆ
ರಾಜ್ಯ ಸಚಿವ ಈಶ್ವರ ಖಂಡ್ರೆಯವರ ಪುತ್ರರಾಗಿರುವ ಸಾಗರ್ ಖಂಡ್ರೆ 419900 ಮತಗಳನ್ನು ಗಳಿಸಿದ್ದರೆ, ಹಾಲಿ ಸಂಸದ ಮತ್ತು ಕೇಂದ್ರ ಸಚಿವರಾಗಿದ್ದ ಭಗವಂತ ಖೂಬಾ 318742 ಮತಗಳನ್ನು ಗಳಿಸಿದ್ದಾರೆ.
ಸಾಗರ್ ಖಂಡ್ರೆಯ ಮುನ್ನಡೆ 101158 ಮತಗಳಿಗೆ ಏರಿಕೆಯಾಗಿದೆ.