ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ʼಎನ್‌ಡಿಎʼ ಗೆಲ್ಲುತ್ತೋ? ʼಇಂಡಿಯಾʼ ಗೆಲ್ಲುತ್ತೋ?
ಹೊಸದಿಲ್ಲಿ : ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪಿದ್ದು, INDIA ಒಕ್ಕೂಟವು ಸರಕಾರ ರಚನೆಗೆ ಕಸರತ್ತು ಮುಂದುವರೆಸಿದ್ದು ಕಿಂಗ್ ಮೇಕರ್ ಗಳಾದ ಜೆಡಿಯು ಮತ್ತು ಟಿಡಿಪಿಯ ಜೊತೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಿತೀಶ್ ಕುಮಾರ್ ಅವರಿಗೆ INDIA ಒಕ್ಕೂಟ ಸೇರಿದರೆ ಉಪಪ್ರಧಾನಿ ಪಟ್ಟ ನೀಡುವ ಆಫರ್ ನೀಡಲಾಗಿದೆ ಎನ್ನಲಾಗಿದೆ.
ಆಂಧ್ರಪ್ರದೇಶದಲ್ಲಿ ಪುಟಿದೆದ್ದಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯು ವಿಧಾನಸಭೆಯಲ್ಲೂ ಜಯಭೇರಿ ಭಾರಿಸಿದೆ. ತೆಲುಗು ದೇಶಂ ಪಾರ್ಟಿಯನ್ನು ಸಂಪರ್ಕಿಸಿರುವ INDIA ನಾಯಕರು, ಒಕ್ಕೂಟ ಸೇರಿ ಸರಕಾರ ರಚನೆಗೆ ನೆರವಾದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಈ ಚುನಾವಣೆಯಲ್ಲಿ NDA ಒಕ್ಕೂಟವು ಕನಿಷ್ಠ 292 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದ್ದು, INDIA ಒಕ್ಕೂಟವು 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 239 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. INDIA ಒಕ್ಕೂಟದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎರಡನೇ ಅತೀ ದೊಡ್ಡ ಪಕ್ಷಗಾಗಿ ಹೊರಹೊಮ್ಮಿದೆ.
Live Updates
- 4 Jun 2024 9:32 AM GMT
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಕೋಟಗೆ 2.57 ಲಕ್ಷ ಮತಗಳ ಅಂತರದ ಜಯ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 2,57,178 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ 7,27,393 ಮತಗಳನ್ನು ಗಳಿಸಿ ಗೆಲುವಿನ ನಗೆ ಬೀರಿದರೆ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 4,70215 ಮತಗಳನ್ನು ಗಳಿಸಲಷ್ಟೇ ಶಕ್ತರಾದರು.
ಕ್ಷೇತ್ರದಲ್ಲಿ ನೋಟಾಗೆ ಒಟ್ಟು 11,223 ಮತ ಚಲಾವಣೆಯಾಗಿವೆ.
- 4 Jun 2024 9:25 AM GMT
ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ನಿಧಾನಗತಿಯಲ್ಲಿ ತನ್ನ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟಿಸುತ್ತಿರುವ ಚುನಾವಣಾ ಆಯೋಗವನ್ನು ಕಾಂಗ್ರೆಸ್ ವಕ್ತಾರ ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೈರಾಂ ರಮೇಶ್, "ಆತ್ಮೀಯ @ECISVEEP, ಆಯೋಗದ ವೆಬ್‌ಸೈಟ್ ಮತ್ತು ವಿವಿಧ ಚಾನೆಲ್‌ಗಳಲ್ಲಿನ ಫಲಿತಾಂಶಗಳು ಕಳೆದ ಎರಡು ಗಂಟೆಗಳಲ್ಲಿದ್ದ ವೇಗದಲ್ಲಿ ಏಕೆ ಅಪ್‌ಡೇಟ್ ಆಗುತ್ತಿಲ್ಲ? ನಿಧಾನಗತಿಯ ಅಪ್ಡೇಟ್ಗೆ ಆದೇಶಗಳು ಎಲ್ಲಿಂದ ಬಂದಿವೆ?" ಎಂದು ಪ್ರಶ್ನಿಸಿದ್ದಾರೆ.
- 4 Jun 2024 9:17 AM GMT
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: 2 ಲಕ್ಷ ದಾಟಿದ ಶೋಭಾ ಕರಂದ್ಲಾಜೆ ಮುನ್ನಡೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 209973 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಶೋಭಾ ಕರಂದ್ಲಾಜೆ 7,53,879 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ - 5,43,906 ಮತಗಳನ್ನು ಗಳಿಸಿದ್ದಾರೆ.
- 4 Jun 2024 9:05 AM GMT
ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 47,640 ಮತಗಳ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 47,640 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 2,44,901 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 1,97,261 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 1,23,539 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.
- 4 Jun 2024 9:02 AM GMT
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: ಶೋಭಾ ಕರಂದ್ಲಾಜೆಗೆ 1,61,600 ಮತಗಳ ಭಾರೀ ಮುನ್ನಡೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 1,61,600 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದರೆ.
ಶೋಭಾ ಕರಂದ್ಲಾಜೆ 6,51,992 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ - 4,90,392 ಮತಗಳನ್ನು ಗಳಿಸಿದ್ದಾರೆ.
- 4 Jun 2024 8:59 AM GMT
2019ರಲ್ಲಿ ಗೆದ್ದ 94 ಸೀಟುಗಳಲ್ಲಿ ಬಿಜೆಪಿಗೆ ಹಿನ್ನಡೆ, ಕಳೆದ ಬಾರಿ ಸೋತ ಕೆಲವೆಡೆ ಮುನ್ನಡೆ
- 4 Jun 2024 8:49 AM GMT
ದಕ್ಷಿಣ ಕನ್ನಡದಲ್ಲಿ ಪದ್ಮರಾಜ್ ವಿರುದ್ಧ ಬ್ರಿಜೇಶ್ ಚೌಟ ಗೆಲುವು