ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ʼಎನ್‌ಡಿಎʼ ಗೆಲ್ಲುತ್ತೋ? ʼಇಂಡಿಯಾʼ ಗೆಲ್ಲುತ್ತೋ?
ಹೊಸದಿಲ್ಲಿ : ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪಿದ್ದು, INDIA ಒಕ್ಕೂಟವು ಸರಕಾರ ರಚನೆಗೆ ಕಸರತ್ತು ಮುಂದುವರೆಸಿದ್ದು ಕಿಂಗ್ ಮೇಕರ್ ಗಳಾದ ಜೆಡಿಯು ಮತ್ತು ಟಿಡಿಪಿಯ ಜೊತೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಿತೀಶ್ ಕುಮಾರ್ ಅವರಿಗೆ INDIA ಒಕ್ಕೂಟ ಸೇರಿದರೆ ಉಪಪ್ರಧಾನಿ ಪಟ್ಟ ನೀಡುವ ಆಫರ್ ನೀಡಲಾಗಿದೆ ಎನ್ನಲಾಗಿದೆ.
ಆಂಧ್ರಪ್ರದೇಶದಲ್ಲಿ ಪುಟಿದೆದ್ದಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯು ವಿಧಾನಸಭೆಯಲ್ಲೂ ಜಯಭೇರಿ ಭಾರಿಸಿದೆ. ತೆಲುಗು ದೇಶಂ ಪಾರ್ಟಿಯನ್ನು ಸಂಪರ್ಕಿಸಿರುವ INDIA ನಾಯಕರು, ಒಕ್ಕೂಟ ಸೇರಿ ಸರಕಾರ ರಚನೆಗೆ ನೆರವಾದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಈ ಚುನಾವಣೆಯಲ್ಲಿ NDA ಒಕ್ಕೂಟವು ಕನಿಷ್ಠ 292 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದ್ದು, INDIA ಒಕ್ಕೂಟವು 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 239 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. INDIA ಒಕ್ಕೂಟದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎರಡನೇ ಅತೀ ದೊಡ್ಡ ಪಕ್ಷಗಾಗಿ ಹೊರಹೊಮ್ಮಿದೆ.
Live Updates
- 4 Jun 2024 7:40 AM GMT
ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 35 ಸಾವಿರ ಮತಗಳ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 35,012 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 1,80,358 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 1,45,346 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 91,935 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.
- 4 Jun 2024 7:34 AM GMT
ಧಾರವಾಡ: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಗೆ 82264 ಮತಗಳ ಮುನ್ನಡೆ
ಪ್ರಹ್ಲಾದ ಜೋಶಿ- 656095 ಮತ
ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ- 573831 ಮತ
- 4 Jun 2024 7:27 AM GMT
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಉವೈಸಿ ಹೈದರಾಬಾದ್ ಕ್ಷೇತ್ರದಿಂದ 1,19,079 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
- 4 Jun 2024 7:22 AM GMT
ಜೈಲಿನಲ್ಲಿರುವ ಖಾಲಿಸ್ತಾನಿ ಅಮೃತ್ಪಾಲ್ ಸಿಂಗ್ ಪಕ್ಷೇತರ ಅಭ್ಯರ್ಥಿಯಾಗಿ ಕದೂರ್ ಸಾಹೇಬ್ ಕ್ಷೇತ್ರದಿಂದ ಮುನ್ನಡೆ
- 4 Jun 2024 7:21 AM GMT
ಉತ್ತರಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ 54,837 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಮುನ್ನಡೆ ಪಡೆದುಕೊಂಡಿದ್ದಾರೆ.
- 4 Jun 2024 7:20 AM GMT
ಲಡಾಖ್ ಲೋಕಸಭಾ ಕ್ಷೇತ್ರ
ಸ್ವತಂತ್ರ ಅಭ್ಯರ್ಥಿ ಮುಹಮ್ಮದ್ ಹನೀಫಾ 19474 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ನ ತ್ಸೆರಿಂಗ್ ನಮ್ಗ್ಯಾಲ್ ಅವರು 19474 ಮತಗಳಿಂದ ಹಿನ್ನಡೆಯಲ್ಲಿದ್ದಾರೆ.
ಬಿಜೆಪಿಯ ತಾಶಿ ಗ್ಯಾಲ್ಸನ್ 22956 ಮತಗಳಿಂದ ಹಿನ್ನಡೆ ಪಡೆದಿದ್ದಾರೆ.