ಸಿಎಎ ಅಡಿ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ನೂತನ ಪೋರ್ಟಲ್ ಪ್ರಾರಂಭ
Photo: indiancitizenshiponline.nic.in
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ, 2109ರ ಅಡಿ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರವು ಮಾ. 12ರಂದು ನೂತನ ಪೋರ್ಟಲ್ ಅನ್ನು ಪ್ರಾರಂಭಿಸಿದೆ.
ಈ ಪೋರ್ಟಲ್ ಅಲ್ಲದೆ, ‘CAA-2019’ ಎಂಬ ಮೊಬೈಲ್ ಆ್ಯಪ್ ಅನ್ನೂ ಕೂಡಾ ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಈ ಮೂಲಕವೂ ಪೌರತ್ವಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇರುವಾಗ, ಸೋಮವಾರ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಪೌರತ್ವ ತಿದ್ದುಪಡಿ ನಿಯಮಗಳು, 2024ರ ಅಧಿಸೂಚನೆಯನ್ನು ಹೊರಡಿಸಿದೆ. ಇದರಿಂದ 2019ರಲ್ಲಿ ಅಂಗೀಕಾರಗೊಮಂಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಸಾಧ್ಯವಾಗಲಿದೆ.
Next Story