ಪಾಟ್ನಾದಲ್ಲಿ ವಿಪಕ್ಷಗಳ ಸಭೆ ಮುಕ್ತಾಯ: ಮುಂದಿನ ಸಭೆ ಶಿಮ್ಲಾದಲ್ಲಿ
ಪಾಟ್ನಾ: 2024 ರ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲು ವಿರೋಧ ಪಕ್ಷಗಳ ನಾಯಕರು ಒಪ್ಪಿಕೊಂಡಿದ್ದಾರೆ, ಆದರೆ ವಿವರಗಳನ್ನು ಅಂತಿಮಗೊಳಿಸಲು ಜುಲೈನಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ಬಿಜೆಪಿಯನ್ನು ಮಣಿಸಲು ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ನಾಲ್ಕು ಗಂಟೆಗಳ ಕಾಲ ವಿಪಕ್ಷಗಳು ಸಭೆ ನಡೆಸಿವೆ.
ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, "ನಾವು 2024 ರಲ್ಲಿ ಒಟ್ಟಾಗಿ ಚುನಾವಣೆಯನ್ನು ಎದುರಿಸಬೇಕಾಗಿದೆ. ನಾವು ಬಿಜೆಪಿಯನ್ನು ಸೋಲಿಸಲು ನಿರ್ಧರಿಸಿದ್ದೇವೆ, ಮುಂದಿನ ಸರ್ಕಾರವನ್ನು ರಚಿಸುವ ವಿಶ್ವಾಸ ಹೊಂದಿದ್ದೇವೆ" ಎಂದು ಹೇಳಿದ್ದಾರೆ.
"2024 ರಲ್ಲಿ ಬಿಜೆಪಿ ವಿರುದ್ಧ ಹೋರಾಡಲು ನಮ್ಮ ರಾಜ್ಯಗಳಲ್ಲಿ ಕೆಲಸ ಮಾಡುವಾಗ ಒಟ್ಟಾಗಿ ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಕಾರ್ಯಸೂಚಿಯನ್ನು ತಯಾರಿಸಲು ನಾವು ಜುಲೈನಲ್ಲಿ ಶಿಮ್ಲಾದಲ್ಲಿ ಮತ್ತೆ ಭೇಟಿಯಾಗುತ್ತೇವೆ" ಎಂದು ಅವರು ತಿಳಿಸಿದ್ದಾರೆ.