ಸಂಸತ್ ಭದ್ರತಾ ವೈಫಲ್ಯದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಪಟ್ಟು: ಮತ್ತೆ 31 ಸಂಸದರು ಅಮಾನತು
Photo: PTI
ಹೊಸದಿಲ್ಲಿ: ಕಳೆದ ವಾರ ಸಂಸತ್ತಿನಲ್ಲಿ ನಡೆದ ಭಾರೀ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ಸದನದಲ್ಲಿ ಪ್ರತಿಭಟನೆ ನಡೆಸಿದ 31 ಪ್ರತಿಪಕ್ಷ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.
ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇದೀಗ ಮತ್ತೆ 31 ಸಂಸದರನ್ನು ಅಮಾನತುಗೊಳಿಸಲಾಗಿದೆ
Next Story