ಪ್ರಯಾಣಿಕನ ಮೊಬೈಲ್ ಬ್ಯಾಟರಿ ಸ್ಫೋಟ; ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
ಹೊಸದಿಲ್ಲಿ: ಟೇಕ್ ಆಫ್ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಬ್ಯಾಟರಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಉದಯಪುರದಿಂದ ದಿಲ್ಲಿಗೆ ಪ್ರಯಾಣಿಸುತ್ತಿದ್ದ ವಿಮಾನವು ತುರ್ತು ಭೂಸ್ಪರ್ಶ ಮಾಡಿದ ಘಟನೆ ಸೋಮವಾರ ನಡೆದಿದೆ. ಉದಯಪುರದ ಡಾಬೊಕ್ ವಿಮಾನನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಸೂಕ್ತ ತಪಾಸಣೆಯ ಬಳಿಕವಷ್ಟೇ ದಿಲ್ಲಿಗೆ ಪ್ರಯಾಣಿಸಲು ವಿಮಾನಕ್ಕೆ ಅನುಮತಿ ನೀಡಲಾಯಿತೆಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
Next Story