ಸಂಸತ್ ಭವನ ದಾಳಿಗೆ 23 ವರ್ಷ | ಹುತಾತ್ಮರಿಗೆ ಪುಷ್ಪ ನಮನ
ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಹಾಗೂ ಸಂಸದರಿಂದ ಗೌರವಾರ್ಪಣೆ
Photo: PTI
ಹೊಸದಿಲ್ಲಿ: 2001ರಲ್ಲಿ, 23 ವರ್ಷಗಳ ಹಿಂದೆ ಸಂಸತ್ ಭವನದ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧರಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಹಲವು ಕೇಂದ್ರ ಸಚಿವರು ಹಾಗೂ ಸಂಸದರು ಪುಷ್ಪ ನಮನ ಸಲ್ಲಿಸಿದರು.
ಹಳೆಯ ಸಂಸತ್ ಭವನದೆದುರು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಅಮಿತ್ ಶಾ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕೂಡಾ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹುತಾತ್ಮ ಯೋಧರಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವಿಶೇಷ ಗೌರವ ಸಲ್ಲಿಸಿತು. ಹುತಾತ್ಮ ದಿನಾಚರಣೆಯ ಅಂಗವಾಗಿ ಈ ವೇಳೆ ಕ್ಷಣ ಕಾಲ ಮೌನಾಚರಣೆಯನ್ನು ನಡೆಸಲಾಯಿತು.
ಕಳೆದ ವರ್ಷದವರೆಗೆ ಕೇಂದ್ರ ಮೀಸಲು ಪೊಲೀಸ್ ಪಡೆ ಶಸ್ತ್ರಾಸ್ತ್ರ ಸಮರ್ಪಣೆ ಗೌರವ ಶಾಸ್ತ್ರವನ್ನು ನೆರವೇರಿಸುತ್ತಾ ಬರುತ್ತಿತ್ತು.
Next Story