ಮಹಾ ಕುಂಭಮೇಳ ಶಿಬಿರದಲ್ಲಿ ಅಗ್ನಿ ಅವಘಡ

Screengrab:X/@PTI_News
ಮಹಾಕುಂಭನಗರ: ಶುಕ್ರವಾರ ಮಹಾಕುಂಭನಗರದ ಶಿಬಿರವೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಹಳೆಯ ಜಿಟಿ ರಸ್ತೆಯಲ್ಲಿನ ತುಳಸಿ ಚೌರಾಹದ ಬಳಿಯ ಶಿಬಿರವೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಆದರೆ, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಖಾಕ್ ಚೌಕ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಯೋಗೇಶ್ ಚತುರ್ವೇದಿ ಹೇಳಿದ್ದಾರೆ.
ಬೆಂಕಿ ನಂದಿಸುವ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಲು ಸ್ಥಳಕ್ಕೆ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್ ಮಾಡಿ ►https://whatsapp.com/channel/0029VaA8ju86LwHn9OQpEq28
Next Story