ಬಜೆಟ್ ಅಧಿವೇಶನ : ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳ ಕುರಿತು ಚರ್ಚೆಗೆ ರಾಹುಲ್ ಗಾಂಧಿ ಒತ್ತಾಯ

ರಾಹುಲ್ ಗಾಂಧಿ (Photo credit: Sansad TV)
ಹೊಸದಿಲ್ಲಿ : ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಲಾಪ ಆರಂಭವಾಗುತ್ತಿದ್ದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳ ಕುರಿತು ಸದನದಲ್ಲಿ ಚರ್ಚೆಗೆ ಒತ್ತಾಯಿಸಿದರು.
ದೇಶದಾದ್ಯಂತ ಮತದಾರರ ಪಟ್ಟಿಯ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತಿವೆ. ಈ ವಿಷಯದ ಬಗ್ಗೆ ಸದನದಲ್ಲಿ ಚರ್ಚೆ ನಡೆಸುವಂತೆ ಕೋರುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದರು.
ಲೋಕಸಭೆಯ ಅಧಿವೇಶನ ಆರಂಭವಾಗುತ್ತಿದ್ದಂತೆ ನ್ಯೂಝಿಲ್ಯಾಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಸ್ಪೀಕರ್ ಓಂ ಬಿರ್ಲಾ ಅಭಿನಂದನೆ ಸಲ್ಲಿಸಿದರು.
ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷದ ಸಂಸದರು ʼನಮಗೆ ನ್ಯಾಯ ಬೇಕುʼ ಎಂದು ಘೋಷಣೆಗಳನ್ನು ಕೂಗಿದರು. ಲೋಕಸಭೆ ಅಲ್ಪಾವಧಿಯ ಮುಂದೂಡಿಕೆ ನಂತರ ಸದನವು ಮಧ್ಯಾಹ್ನ 12 ಗಂಟೆಗೆ ಪುನರಾರಂಭವಾಯಿತು.
पूरे देश में वोटर लिस्ट पर सवाल उठ रहे हैं। इसलिए पूरा विपक्ष चाहता है कि संसद में इसे लेकर चर्चा हो।
— Congress (@INCIndia) March 10, 2025
: लोक सभा में नेता विपक्ष श्री @RahulGandhi pic.twitter.com/4M7eZTUaTY