ದಿಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿಎಂ ರೇಖಾ ಗುಪ್ತಗೆ ಹಣಕಾಸು, ಕಂದಾಯ ಇಲಾಖೆ

Photo | PTI
ಹೊಸದಿಲ್ಲಿ : ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಮತ್ತು ಸಂಪುಟ ಸಚಿವರಾಗಿ ಆರು ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸರಕಾರದಲ್ಲಿ ಖಾತೆ ಹಂಚಿಕೆ ಕಾರ್ಯವು ನಡೆದಿದೆ.
ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಹಣಕಾಸು, ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಆಶಿಶ್ ಸೂದ್ ಅವರಿಗೆ ಗೃಹ ಇಲಾಖೆ, ವಿದ್ಯುತ್, ಶಿಕ್ಷಣ ಮತ್ತು ನಗರಾಭಿವೃದ್ಧಿ ಖಾತೆಯ ಜವಾಬ್ಧಾರಿಯನ್ನು ನೀಡಲಾಗಿದೆ.
ಪರ್ವೇಶ್ ವರ್ಮಾ ಅವರಿಗೆ ಲೋಕೋಪಯೋಗಿ ಇಲಾಖೆ(ಪಿಡಬ್ಲ್ಯುಡಿ) ಮತ್ತು ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆ ಜವಾಬ್ಧಾರಿಯನ್ನು ನೀಡಲಾಗಿದೆ. ಪಂಕಜ್ ಕುಮಾರ್ ಸಿಂಗ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಸಾರಿಗೆ ಇಲಾಖೆಯ ಜವಾಬ್ಧಾರಿಯನ್ನು ನೀಡಲಾಗಿದೆ.
ಕಪಿಲ್ ಮಿಶ್ರಾ ಅವರಿಗೆ ಕಾನೂನು ಮತ್ತು ನ್ಯಾಯ, ಕಾರ್ಮಿಕ ಇಲಾಖೆಯ ಜವಾಬ್ಧಾರಿಯನ್ನು ನೀಡಲಾಗಿದೆ. ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೆ ಆಹಾರ ಮತ್ತು ಸರಬರಾಜು, ಅರಣ್ಯ ಮತ್ತು ಪರಿಸರ ಖಾತೆಯ ಜವಾಬ್ಧಾರಿಯನ್ನು ನೀಡಲಾಗಿದೆ.