ಕೇಂದ್ರದ ಜೊತೆ ಮುಂದುವರಿದ ಜಟಾಪಟಿ: ರಾಜ್ಯ ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆಯನ್ನು ಬದಲಿಸಿದ ತಮಿಳುನಾಡು ಸರಕಾರ

Photo credit: indiatoday.com
ಚೆನ್ನೈ: ಹಿಂದಿ ಹೇರಿಕೆ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸುತ್ತಿರುವ ತಮಿಳುನಾಡಿನ ಡಿಎಂಕೆ ಸರಕಾರ, 2025ರ ರಾಜ್ಯ ಬಜೆಟ್ ನ ಪ್ರಚಾರ ಸಾಮಗ್ರಿಗಳಲ್ಲಿ ಚಾಲ್ತಿಯಲ್ಲಿರುವ ರೂಪಾಯಿ ಚಿಹ್ನೆಗೆ ಬದಲಾಗಿ ತಮಿಳು ಲಿಪಿಯ ರೂಪಾಯಿ ಚಿಹ್ನೆಯನ್ನು ಮುದ್ರಿಸಿದೆ.
ಡಿಎಂಕೆ ಸರ್ಕಾರ ರಾಜ್ಯದ 2025-26ನೇ ಸಾಲಿನ ಬಜೆಟ್ ಲೋಗೋದಲ್ಲಿ ರೂಪಾಯಿ ಚಿಹ್ನೆಗೆ (₹) ಬದಲಾಗಿ ತಮಿಳು ಲಿಪಿ (ரூ) ಬಳಸಿದೆ.
ಶುಕ್ರವಾರ (ಮಾ.14) ರಂದು ತಮಿಳುನಾಡು ಹಣಕಾಸು ಸಚಿವ ತಂಗಮ್ ತೆನ್ನರಸು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಡಿಎಂಕೆ ಸರಕಾರದ ಈ ನಡೆಯನ್ನು ಹಿಂದಿ ಹೇರಿಕೆ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗಾಗಿ ಒತ್ತಡ ಹೇರುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರಕ್ಕೆ ತಿರುಗೇಟು ಎಂದೇ ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.
ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.
Next Story