ಸೋನಿಯಾ-ರಾಹುಲ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ
Photo : ಸೋನಿಯಾ-ರಾಹುಲ್ \ PTI
ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಾಗೂ ಅವರ ತಾಯಿ ಸೋನಿಯಾ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಸೋನಿಯಾ ಹಾಗೂ ರಾಹುಲ್ ಅವರು ವಿಪಕ್ಷಗಳ ಸಭೆ ಮುಗಿಸಿ ಬೆಂಗಳೂರಿನಿಂದ ದಿಲ್ಲಿಗೆ ಪ್ರಯಾಣಿಸುತ್ತಿದ್ದರು. ಮಾರ್ಗ ಮಧ್ಯೆ ಹವಾಮಾನ ವೈಪರೀತ್ಯದಿಂದಾಗಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
Next Story