ರಾಹುಲ್ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ
ಅರ್ಜಿದಾರರಿಗೆ ಒಂದು ಲಕ್ಷ ರೂ.ದಂಡ
ರಾಹುಲ್ ಗಾಂಧಿ Photo : twitter/INCIndia
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವದ ಮರುಸ್ಥಾಪನೆಯನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಶುಕ್ರವಾರ ವಜಾಗೊಳಿಸಿದ ಸರ್ವೋಚ್ಚ ನ್ಯಾಯಾಲಯವು ಅರ್ಜಿದಾರರಿಗೆ ಒಂದು ಲಕ್ಷ ರೂ.ದಂಡವನ್ನು ವಿಧಿಸಿದೆ.
ನ್ಯಾಯವಾದಿ ಅಶೋಕ ಪಾಂಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ಪೀಠವು,ಅರ್ಜಿದಾರರ ಯಾವುದೇ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿಲ್ಲ, ಹೀಗಾಗಿ ಅರ್ಜಿಯು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಹೇಳಿತು.
‘ಮೋದಿ’ ಉಪನಾಮ ಕುರಿತು ಟೀಕೆಗಾಗಿ ಸಂಬಂಧಿಸಿದ ಪ್ರಕರಣದಲ್ಲಿ ದೋಷ ನಿರ್ಣಯಕ್ಕೆ ಸರ್ವೋಚ್ಚ ನ್ಯಾಯಾಲಯವು ಆ.4ರಂದು ತಡೆಯಾಜ್ಞೆ ನೀಡಿದ ಬಳಿಕ ಲೋಕಸಭಾ ಸಚಿವಾಲಯವು ರಾಹುಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿತ್ತು.
Next Story