ಅಫ್ಘಾನಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದಿಲ್ಲಿ-ಎನ್ಸಿಆರ್, ಜಮ್ಮು, ಕಾಶ್ಮೀರದಲ್ಲೂ ಕಂಪನ
ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ದಿಲ್ಲಿ-ಎನ್ಸಿಆರ್, ಜಮ್ಮು ಕಾಶ್ಮೀರದ ಕೆಲವು ಭಾಗಗಳಲ್ಲಿ ಮತ್ತು ಅಫ್ಘಾನಿಸ್ತಾನ, ಪಾಕಿಸ್ತಾನದ ಗಡಿಗಳಲ್ಲಿ ಭೂಕಂಪನದ ಅನುಭವವಾಗಿದೆ. 5.8 ತೀವ್ರತೆಯ ಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.
ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ ಭೂಕಂಪದ ಕೇಂದ್ರಬಿಂದು ಇದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ಹೇಳಿದೆ.
ದಿಲ್ಲಿ ಎನ್ಸಿಆರ್ ಭಾಗದಲ್ಲಿ ರಾತ್ರಿ 9.34 ಕ್ಕೆ ಕಂಪನದ ಅನುಭವವಾಗಿದೆ.
Next Story