Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇಗೆ ವಿಸಿಟಿಂಗ್ ವೀಸಾಗಳ ಅನುಮೋದನೆ...

ಯುಎಇಗೆ ವಿಸಿಟಿಂಗ್ ವೀಸಾಗಳ ಅನುಮೋದನೆ ಹೆಚ್ಚುತ್ತಿದೆ : ವರದಿ

ವಾರ್ತಾಭಾರತಿವಾರ್ತಾಭಾರತಿ7 Jan 2025 9:16 PM IST
share
ಯುಎಇಗೆ ವಿಸಿಟಿಂಗ್ ವೀಸಾಗಳ ಅನುಮೋದನೆ ಹೆಚ್ಚುತ್ತಿದೆ : ವರದಿ

ದುಬೈ : ಹೆಚ್ಚಿನ ಅರ್ಜಿದಾರರು ಅಗತ್ಯ ದಾಖಲೆಗಳನ್ನು ಒದಗಿಸುವುದರಿಂದ ಇತ್ತೀಚಿಗೆ ಯುಎಇಗೆ ವಿಸಿಟಿಂಗ್ ವೀಸಾಗಳ ಅನುಮೋದನೆ ಹೆಚ್ಚುತ್ತಿದೆ ಎಂದು ಪ್ರವಾಸೋದ್ಯಮದ ಪ್ರಮುಖರು ತಿಳಿಸಿದ್ದಾರೆ.

ಯುಎಇಗೆ ಭೇಟಿ ನೀಡುವವರು ರಿಟರ್ನ್‌ ಟಿಕೆಟ್, ವಸತಿ ಕುರಿತು ದಾಖಲೆ ಮತ್ತು ನಿಗದಿತ ಮೊತ್ತದಷ್ಟು ಹಣವನ್ನು ಹೊಂದಿರುವುದು ಕಡ್ಡಾಯವಾಗಿದೆ. ಟ್ರಾವೆಲ್ ಏಜೆಂಟ್‌ ಗಳ ಪ್ರಕಾರ, ಈ ಮೊದಲು ಅರ್ಜಿದಾರರು ನಿಯಮಾವಳಿಗಳನ್ನು ಪೂರೈಸಲು ವಿಫಲರಾಗುತ್ತಿದ್ದರಿಂದ ಹೆಚ್ಚಿನ ವಿಸಿಟಿಂಗ್ ವೀಸಾಗಳು ತಿರಸ್ಕೃತಗೊಳ್ಳುತ್ತಿದ್ದವು. ಆದರೆ, ಅಧಿಕಾರಿಗಳು ಮತ್ತು ಟ್ರಾವೆಲ್ ಏಜೆನ್ಸಿಗಳು ಜಾಗೃತಿ ಅಭಿಯಾನಗಳನ್ನು ಮಾಡುತ್ತಿದ್ದು, ಯುಎಇಗೆ ಭೇಟಿ ನೀಡುವವರು ನಿಯಮಗಳನ್ನು ಅನುಸರಿಸುವಂತೆ ಮಾಡಿವೆ.

ಯುಎಇ, ವಿಶೇಷವಾಗಿ ದುಬೈ ಪ್ರತಿವರ್ಷ ಮಿಲಿಯಗಟ್ಟಲೆ ಪ್ರವಾಸಿಗಳನ್ನು ಬರಮಾಡಿಕೊಳ್ಳುತ್ತಿದೆ. ಶ್ರೀಮಂತ ರಾಷ್ಟ್ರಗಳಿಂದ ಆಗಮಿಸುವ ಪ್ರವಾಸಿಗಳ ಸಂಖ್ಯೆ ಹೆಚ್ಚುತ್ತಿದೆ. 2024ರ ಮೊದಲ 11 ತಿಂಗಳುಗಳಲ್ಲಿ 16.79 ಮಿಲಿಯನ್ ಪ್ರವಾಸಿಗಳು ದುಬೈಗೆ ಭೇಟಿ ನೀಡಿದ್ದು,ಇದು ಶೇ.9ರಷ್ಟು ಹೆಚ್ಚಳವಾಗಿದೆ. ಒಟ್ಟು ಪ್ರವಾಸಿಗಳ ಸಂಖ್ಯೆಯಲ್ಲಿ ಪಶ್ಚಿಮ ಯುರೋಪ್‌ನವರ ಪಾಲು ಶೇ.20ರಷ್ಟಿದೆ.

2024ರ ಕೊನೆಯ ತ್ರೈಮಾಸಿಕದಲ್ಲಿ ವಿಸಿಟಿಂಗ್ ವೀಸಾಗಳ ಅನುಮೋದನೆಯಲ್ಲಿ ಸುಮಾರು ಶೇ.5ರಿಂದ ಶೇ.6ರಷ್ಟು ಏರಿಕೆಯನ್ನು ತನ್ನ ಸಂಸ್ಥೆಯು ನೋಡಿದೆ. ಇದು ಕಂಪನಿಯು ಸಾಂಪ್ರದಾಯಿಕವಾಗಿ ಹೊಂದಿದ್ದ ಅನುಮೋದನೆಗಳಿಗಿಂತ ಶೇ.1ರಿಂದ ಶೇ.2ರಷ್ಟು ಅಧಿಕವಾಗಿದೆ ಎಂದು ಅರಬ್ ವರ್ಲ್ಡ್ ಟೂರಿಸಮ್‌ನ ಆಪರೇಷನ್ಸ್ ಮ್ಯಾನೇಜರ್ ಶೆರಾಸ್ ಶರಾಫ್ ಹೇಳಿದ್ದಾರೆ.

ಆದರೆ ಟ್ರಾವೆಲ್ ಏಜೆನ್ಸಿಗಳು ಹೋಟೆಲ್ ಮತ್ತು ವಿಮಾನಯಾನ ವಿವರಗಳನ್ನು ಲಗತ್ತಿಸುವಂತೆ ಗ್ರಾಹಕರಿಗೆ ಅರಿವು ಮೂಡಿಸುತ್ತಿವೆ ಎಂದು ಮುಸಾಫಿರ್ ಡಾಟ್ ಕಾಮ್‌ನ ರಿಕಿನ್ ಶೇಠ್ ಹೇಳಿದ್ದಾರೆ. ದುಬೈ ದಕ್ಷಿಣ ಏಶ್ಯಾದಲ್ಲಿ ಅತ್ಯಂತ ಜನಪ್ರಿಯ ಪ್ರವಾಸಿ ತಾಣವಾಗಿದೆ. ದುಬೈನಲ್ಲಿ ಜನರು ತಮ್ಮ ಮನೆಯ ವಾತಾವರಣವನ್ನು ಅನುಭವಿಸುತ್ತಾರೆ. ಐತಿಹಾಸಿಕವಾಗಿ ದುಬೈ ಶಾಪಿಂಗ್ ಫೆಸ್ಟಿವಲ್ ಪರಿಗಣಿಸಿ ಚಳಿಗಾಲದಲ್ಲಿ ವ್ಯಾಪಾರ ಹೆಚ್ಚುವುದನ್ನು ನಾವು ಯಾವಾಗಲೂ ನೋಡುತ್ತಿದ್ದೇವೆ. ಮುಂಬರುವ ತಿಂಗಳುಗಳಲ್ಲಿ ಪ್ರವಾಸಿಗಳ ಸಂಖ್ಯೆಯಲ್ಲಿ ಶೇ.25-30ರಷ್ಟು ಹೆಚ್ಚಳವನ್ನು ನಾವು ನಿರೀಕ್ಷಿಸಿದ್ದೇವೆ. ಅರ್ಜಿದಾರರು ಪ್ರಾಮಾಣಿಕವಾದ ದಾಖಲೆಗಳನ್ನು ಲಗತ್ತಿಸಿದರೆ ಅವರ ವೀಸಾಗಳನ್ನು ನಿರಾಕರಿಸುವುದಿಲ್ಲ. ಹೀಗಾಗಿ ಅನುಮೋದನೆ ಪ್ರಮಾಣ ಗಮನಾರ್ಹವಾಗಿ ಹೆಚ್ಚಿದೆ ಎಂದು ಶೇಠ್ ಹೇಳಿದರು.

ದೃಢೀಕೃತ ಟಿಕೆಟ್‌ಗಳು, ಹೊಟೇಲ್ ಬುಕಿಂಗ್‌ ದಾಖಲೆಗಳು ಅಥವಾ ವಸತಿ ಪುರಾವೆಯಂತಹ ಎಲ್ಲ ಅಗತ್ಯ ದಾಖಲೆಗಳನ್ನು ಒದಗಿಸುವ ಅರ್ಜಿದಾರರು ಯಾವುದೇ ಸಮಸ್ಯೆಯಿಲ್ಲದೆ ವೀಸಾ ಅನುಮೋದನೆಗಳನ್ನು ಪಡೆಯುತ್ತಾರೆ ಎಂದು ಶರಾಫ್ ಹೇಳಿದ್ದಾರೆ.

ಕೃಪೆ: khaleejtimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X