ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
Photo: PTI
ಹೊಸದಿಲ್ಲಿ : ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಖಚಿತಪಡಿಸಿದ್ದಾರೆ. ಮಸೂದೆಯ ಹೆಚ್ಚಿನ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ. ನಾಳೆ ಹೊಸ ಸಂಸತ್ ಭವನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುತ್ತಿದೆ. ಲೋಕಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಒದಗಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎನ್ನಲಾಗಿದೆ.
Next Story